ಕಂಪ್ಲಿ: ತಾಲ್ಲೂಕಿನ ಶ್ರೀರಾಮರಂಗಾಪುರ-ಏಳುಬೆಂಚಿ ಗ್ರಾಮದ ರಸ್ತೆಯಲ್ಲಿನ ಗುಂಡಿಗಳಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಕಾರಣ ನಾಲ್ವರು ಯುವ ರೈತರು ತಮ್ಮ ಸ್ವಂತ ಹಣದಲ್ಲಿ ರಸ್ತೆ ದುರಸ್ತಿಗೊಳಿಸಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.

‘ರಸ್ತೆಯಲ್ಲಿನ ಗುಂಡಿಗಳಿಂದಾಗಿ ಅನೇಕ ಅಪಘಾತ ಸಂಭವಿಸಿದ್ದು, ಈಚೆಗೆ ಒಬ್ಬರು ಮೃತಪಟ್ಟಿದ್ದಾರೆ. ಆದರೂ ಸಂಬಂಧಿಸಿದ ಅಧಿಕಾರಿಗಳು ರಸ್ತೆ ದುರಸ್ತಿಗೆ ಕ್ರಮ ವಹಿಸುತ್ತಿಲ್ಲ’ ಎಂದು ರೈತ ಮುಖಂಡ ಪೊತ್ತೂರು ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಈ ರಸ್ತೆ ಮೂಲಕ ಜಿಂದಾಲ್ ಕಾರ್ಖಾನೆಗೆ ಬೈಕ್ಗಳ ಮೂಲಕ ಸಾವಿರಾರು ಜನರು ಸಂಚರಿಸುತ್ತಾರೆ. ಈ ಕಾರಣದಿಂದ ಗುಂಡಿಗಳನ್ನು ಮುಚ್ಚಲಾಗಿದ್ದು, ಅಂದಾಜು ₹5 ವೆಚ್ಚ ತಲುಗಿದೆ. ಮಳೆಗಾಲ ಆರಂಭಕ್ಕೂ ಮುನ್ನ ಅಧಿಕಾರಿಗಳು ರಸ್ತೆ ಶಾಶ್ವತ ದುರಸ್ತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಗ್ರಾಮದ ಯುವ ರೈತರಾದ ವೈ.ಪಿ. ರವಿಕುಮಾರ, ಪಚ್ಚಿಪಾಟಿ ರಾಮಾಂಜನೇಯಲು, ನವೀನ್ ಸೇರಿದಂತೆ ಇತರರು ಸಹಕಾರ ನೀಡಿದರು ಎಂದು ಸ್ಮರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.