ಬಳ್ಳಾರಿ: ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಮೇ 4ರಂದು ನಗರದಲ್ಲಿ ‘ಕರ್ನಾಟಕ ಸ್ವಾಭಿಮಾನ ನಡಿಗೆ–2026’ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕಿ ಬೀನಾ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 11ಕ್ಕೆ ಗವಿಯಪ್ಪ (ಮೋತಿ) ವೃತ್ತದಿಂದ ಪಾದಯಾತ್ರೆ ಆರಂಭವಾಗಿ ಮಧ್ಯಾಹ್ನ ಗಾಂಧಿಭವನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. 1969ರ ಸ್ಟೋನ್ವಾಲ್ ಇನ್ ಹೋರಾಟದ ಸ್ಮರಣಾರ್ಥ ಈ ‘ಪ್ರೈಡ್’ ನಡಿಗೆ ಆಯೋಜಿಸಲಾಗುತ್ತಿದೆ’ ಎಂದರು.

‘ಸತತ ಹೋರಾಟದಿಂದಾಗಿ ಸರ್ಕಾರಿ ಉದ್ಯೋಗದಲ್ಲಿ ಶೇ.1 ಮೀಸಲಾತಿ ದೊರೆತಿದೆ. ಆದರೆ, ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ 2026ರ ತಿದ್ದುಪಡಿ ಕಾಯ್ದೆ ಸಮುದಾಯಕ್ಕೆ ಹಿನ್ನಡೆ ಆಗಿದೆ. ಈ ಕಾಯ್ದೆಯು ಸ್ವಯಂ ಗುರುತಿನ ಹಕ್ಕನ್ನು ಕಸಿದುಕೊಳ್ಳುತ್ತಿದ್ದು, ಸಂವಿಧಾನದ ಆಶಯಗಳಿಗೆ ಧಕ್ಕೆಯಾಗಿದೆ. ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದ ಈ ಹಕ್ಕು ನಿರಾಕರಣಾ ನೀತಿಗಳ ವಿರುದ್ಧ ಧ್ವನಿ ಎತ್ತಬೇಕು ಹಾಗೂ ಶಿಕ್ಷಣ, ಆರೋಗ್ಯ ಮತ್ತು ಜೀವ ನೋಪಾಯ ಕ್ಷೇತ್ರಗಳಲ್ಲಿ ಸಮುದಾಯಕ್ಕೆ ಬಜೆಟ್ನಲ್ಲಿ ಹೆಚ್ಚಿನ ಅನುದಾನ ನೀಡಬೇಕು’ ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಚಂದ್ರ ಕುಮಾರಿ, ಫರ್ವೀನ್ ಬಾನು, ಗೌಸಿಯ ಬಾನು, ಅರುಣಾ, ಹೇಮಲತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-25-1168057337

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.