ಬಳ್ಳಾರಿ: ‘ಬಳ್ಳಾರಿಯಲ್ಲಿ ತಾಲ್ಲೂಕುವಾರು ಕೆಡಿಪಿ (ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ) ಸಭೆ ನಡೆಸುವೆ. ವಿಜಯನಗರ ಜಿಲ್ಲೆಯ ಕೆಡಿಪಿ ಸಭೆಯನ್ನು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲೇ ಸಭೆ ನಡೆಸಿಕೊಟ್ಟಿದ್ದೇನೆ. ಅದೇ ರೀತಿ ಬಳ್ಳಾರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆತಂದು ಕೆಡಿಪಿ ಸಭೆ ನಡೆಸುವೆ...’

ಇದು 2024ರ ಆಗಸ್ಟ್ 17ರಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ನೀಡಿದ್ದ ಹೇಳಿಕೆ. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣವೊಂದರಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರಿಂದ, ಸಚಿವರು ಕೆಡಿಪಿ ಸಭೆ ಅರ್ಧಕ್ಕೇ ಮೊಟಕುಗೊಳಿಸಿ ಬೆಂಗಳೂರಿಗೆ ಹೋಗಿದ್ದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದು, ಜಮೀರ್ ಅವರ ಭರವಸೆ ಕೊನೆಗೂ ಕಾರ್ಯರೂಪಕ್ಕೆ ಬರಲಿಲ್ಲ.

ಬಳ್ಳಾರಿಗೆ ಸಿಗುವರೇ ಸಮರ್ಥ ಉಸ್ತುವಾರಿ?: ‘ಬಳ್ಳಾರಿಯಲ್ಲಿ ಕೊನೆಯ ಕೆಡಿಪಿ ಸಭೆ ನಡೆದಿದ್ದು 2025ರ ಸೆಪ್ಟೆಂಬರ್ 29ರಂದು. ಅಲ್ಲಿಂದೀಚೆಗೆ ಸಭೆಯೇ ನಡೆದಿಲ್ಲ. ಜಿಲ್ಲೆಯಲ್ಲಿ ಹಲವು ಪ್ರಮುಖ ಘಟನೆಗಳು ಸಂಭವಿಸಿದರೂ ಉಸ್ತುವಾರಿ ಸಚಿವರು ಜಿಲ್ಲೆಯತ್ತ ಸುಳಿದಿಲ್ಲ. ನಗರದಲ್ಲಿ ಸಚಿವರ ಕಚೇರಿಯೂ ಇಲ್ಲ, ಕನಿಷ್ಠ ಒಬ್ಬ ವಿಶೇಷ ಕರ್ತವ್ಯಾಧಿಕಾರಿಯನ್ನೂ (ಒಎಸ್ಡಿ) ಇಲ್ಲಿ ನೇಮಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಬದಲಾಗುವ ಸಾಧ್ಯತೆಯಿದೆಯೇ ಎಂಬ ಬಗ್ಗೆ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆದಿದೆ.

ಹೊಸ ಸರ್ಕಾರದ ಮೇಲೆ ನಿರೀಕ್ಷೆ: ಸದ್ಯ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳಿದ್ದು, ಹೊಸ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆಗಳಿವೆ. ನೂತನ ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ರಚನೆಯಾಗಿ, ಜಿಲ್ಲೆಗೆ ಸೂಕ್ತ ಜಿಲ್ಲಾ ಉಸ್ತುವಾರಿ ಸಚಿವರು ನೇಮಿಸಬಹುದು’ ಎಂಬ ಆಶಯ ಕಾಂಗ್ರೆಸ್ ಮುಖಂಡರಲ್ಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-25-236744148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.