ಕುಡತಿನಿ (ಸಂಡೂರು): ‘ಹೆಲ್ಮೆಟ್ ಕೇವಲ ನಿಯಮ ಅಲ್ಲ; ಅದು ಸಾರ್ವಜನಿಕರ ಜೀವ ರಕ್ಷಣೆಗೆ ಅಗತ್ಯವಾಗಿದೆ. ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸುಂದರ ಜೀವನ ರಕ್ಷಣೆ ಮಾಡಿಕೊಳ್ಳಬೇಕು' ಎಂದು ಕುರುಗೋಡು ವೃತ್ತದ ಸಿಪಿಐ ಬಾಳನಗೌಡ ಹೇಳಿದರು.

ಪಟ್ಟಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ, ಕುಡತಿನಿ ಪೊಲೀಸ್ ಠಾಣೆಯ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

'ಸಾರ್ವಜನಿಕರು ದ್ವಿಚಕ್ರ ವಾಹನಗಳನ್ನು ಅತಿಯಾದ ವೇಗದಿಂದ ಚಾಲನೆ ಮಾಡಬಾರದು. ಬೈಕ್ ಸವಾರರು ತಮ್ಮ ಜೀವ ರಕ್ಷಣೆಗಾಗಿ ಐಎಸ್ಐ ಪ್ರಾಮಾಣಿತ ಪೂರ್ಣ ಹೆಲ್ಮೆಟ್ ಬಳಸಿ ಜೀವ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು' ಎಂದರು.

ಪೊಲೀಸರು ಹೆಲ್ಮೆಟ್ ಧರಿಸಿ ಬೈಕ್ ಚಾಲನೆಯೊಂದಿಗೆ ಪಟ್ಟಣದಲ್ಲಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾಡುವುದರ ಮೂಲಕ ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸಿದರು.

ಕುಡತಿನಿ ಪೊಲೀಸ್ ಠಾಣೆಯ ಪಿಎಸ್ಐ ಶಾಂತಮೂರ್ತಿ, ಠಾಣೆಯ ಪೊಲೀಸರು, ಸಿಬ್ಬಂದಿ ಹೆಲ್ಮೆಟ್ ಜಾಗೃತಿ ಅಭಿಯಾನದಲ್ಲಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-25-880337027

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.