ಬಳ್ಳಾರಿ: ಕುಡುತಿನಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆ ಸ್ಥಾಪನೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಬಂಡಿಗಳೊಂದಿಗೆ ರಸ್ತೆ ತಡೆ ನಡೆಸಿದ ಹಾಗೂ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 33 ರೈತ ಮುಖಂಡರು ಮತ್ತು ಇತರರ ವಿರುದ್ಧ ಕುಡುತಿನಿ ಪೊಲೀಸ್ ಠಾಣೆಯಲ್ಲಿ ಮೇ 16ರಂದು ಪ್ರಕರಣ ದಾಖಲಾಗಿದೆ.

ಕುಡುತಿನಿಯಲ್ಲಿ ಕೆಐಎಡಿಬಿ 2ನೇ ಹಂತದ ಕೈಗಾರಿಕಾ ಪ್ರದೇಶ ಸ್ಥಾಪನೆಗಾಗಿ ಸುಮಾರು 801 ಎಕರೆ ಜಮೀನನ್ನು ಭೂಸ್ವಾಧೀನಪಡಿಸಿಕೊಂಡಿದೆ. ಈ ಜಮೀನಿನ ಮೋಜಣಿ ಮತ್ತು ಗಡಿ ಗುರುತಿಸುವ ಕಾರ್ಯಕ್ಕೆ ಅಡ್ಡಿಯಾಗಿರುವ ಜಾಲಿ ಗಿಡಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಕಳೆದ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಇದನ್ನು ವಿರೋಧಿಸಿದ ಭೂಸಂತ್ರಸ್ತರು ಹಾಗೂ ರೈತ ಮುಖಂಡರು ಎತ್ತಿನ ಬಂಡಿಗಳೊಂದಿಗೆ ಜಮೀನಿಗೆ ಉಳುಮೆ ಮಾಡಲು ತೆರಳುತ್ತಿದ್ದಾರೆಂಬ ಮಾಹಿತಿ ಮೇರೆಗೆ ಪೊಲೀಸರು ಹೊಸಪೇಟೆ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ 67ರ ಬೈಪಾಸ್ ಬಳಿ ಬಂದೋಬಸ್ತ್ ಕೈಗೊಂಡಿದ್ದರು.

ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ 100ರಿಂದ 150 ಜನರಿದ್ದ ಗುಂಪು 8 ಎತ್ತಿನ ಬಂಡಿಗಳೊಂದಿಗೆ ಬಂದು ಹೆದ್ದಾರಿಯಲ್ಲೇ ಕುಳಿತು ಸಂಚಾರಕ್ಕೆ ಅಡ್ಡಿಪಡಿಸಿದರು. ಪೊಲೀಸರು ಮೈಕ್ ಮೂಲಕ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಆದೇಶಗಳನ್ನು ಉಲ್ಲೇಖಿಸಿ ರಸ್ತೆ ತಡೆ ತೆರವುಗೊಳಿಸುವಂತೆ ಮನವಿ ಮಾಡಿದರೂ ಪ್ರತಿಭಟನಾಕಾರರು ವಾಗ್ವಾದಕ್ಕಿಳಿದರು.

ಪ್ರತಿಭಟನಾಕಾರರು ಪೊಲೀಸರೊಂದಿಗೆ ತಳ್ಳಾಟ-ನೂಕಾಟ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದರಲ್ಲದೆ, ಎತ್ತಿನ ಬಂಡಿಗಳನ್ನು ಜೋರಾಗಿ ಹೊಡೆದ ಪರಿಣಾಮ ಕುರುಗೋಡು ಪಿಎಸ್ಐ ಸುಪ್ರೀತ್ ವಿರೂಪಾಕ್ಷಪ್ಪ ಅವರಿಗೆ ಬಂಡಿ ತಗುಲಿ ಕೆಳಕ್ಕೆ ಬಿದ್ದು ಗಾಯಗೊಂಡಿದ್ದಾರೆ. ಅಲ್ಲದೆ, ಸ್ಥಳದಲ್ಲಿದ್ದ ಇತರ ಪೊಲೀಸ್ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಲಾಗಿದೆ ಎಂದು ಎಫ್ಐಆರ್ನಲ್ಲಿ ವಿವರಿಸಲಾಗಿದೆ.

ಈ ಸಂಬಂಧ ಪಿಎಸ್ಐ ಶಾಂತಮೂರ್ತಿ ಅವರು ನೀಡಿದ ದೂರಿನಂತೆ 33 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆಯಲ್ಲಿ ಒಟ್ಟು 8 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಮತ್ತೊಂದು ದೂರು: ಇದೇ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಸಹಾಯಕ ಕಾರ್ಯಪಾಲಕ ಅಭಿಯಂತರ ಎಸ್.ಜನಾರ್ಧನ ನಾಯ್ಕ್ ಅವರು ನೀಡಿದ ದೂರು ಆಧರಿಸಿ ನಾಲ್ವರ ಮೇಲೆ ಮೇ 16ರಂದು ಎಫ್ಐಆರ್ ದಾಖಲಿಸಲಾಗಿದೆ.

ಕೈಗಾರಿಕಾ ಪ್ರದೇಶದಲ್ಲಿ ಜಾಲಿ ಗಿಡಗಳನ್ನು ತೆರವುಗೊಳಿಸುವ ವೇಳೆ ತಿಮ್ಮಪ್ಪ, ಹನುಮಂತ, ಪಂಪಣ್ಣ ಮತ್ತು ರಾಮಣ್ಣ ಮತ್ತು ಇತರರು ಜಮೀನಿನಲ್ಲಿ ಉಳುಮೆ ಮಾಡಲು ಯತ್ನಿಸಿದರು. ಇದನ್ನು ತಡೆದ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಯ ಮೇಲೆ ಆರೋಪಿಗಳು ಕಲ್ಲು ತೂರಾಟ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-25-28023083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.