ಕುರುಗೋಡು: ತಾಲ್ಲೂಕಿನ ಎಚ್.ವೀರಾಪುರ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿದ ಮಹಿಳೆಯರು ಗ್ರಾಮ ಪಂಚಾಯಿತಿಗೆ ಮುತ್ತಿಗೆಹಾಕಿ ಶನಿವಾರ ಪ್ರತಿಭಟಿಸಿದರು.

ಕುಡಿಯುವ ನೀರಿಗಾಗಿ ತುಂಗಭದ್ರಾ ಜಲಾಶಯದಿಂದ ಕೆಳಮಟ್ಟದ ಕಾಲುವೆಗೆ ನೀರು ಬಿಡಲಾಗಿದ್ದು, ಕೆರೆ ತುಂಬಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇದುವರೆಗೂ ಕ್ರಮ ವಹಿಸಿಲ್ಲ. ಕಾಲುವೆಯಿಂದ ಕೆರೆವರೆಗೆ 8 ಕಿ.ಮೀ. ದೂರದ ಪೈಪ್ಲೈಲ್ ನಿರ್ಮಾಣ ಬಾಕಿಯಿದ್ದು, ಕೆರೆ ನಿರ್ವಹಣೆಗೆ ₹58 ಲಕ್ಷ ಬಿಡುಗಡೆಯಾದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವರಾಜ್ ಪ್ರತಿಕ್ರಿಯಿಸಿ, ‘ಗ್ರಾಮ ಪಂಚಾಯಿತಿ ಸಿಬ್ಬಂದಿ ಬಳಕೆಗೆ ನಿತ್ಯ ನೀರು ಸರಬರಾಜು ಮಾಡುತ್ತಿದ್ದಾರೆ. ಕೆರೆಗೆ ನೀರು ತುಂಬಿಸುವ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗಮನಕ್ಕೆ ತರಲಾಗುವುದು’ ಎಂದು ಭರವಸೆ ನೀಡಿದರು.

ಪಿಡಿಒ ಅವರ ಭರವಸೆ ಮೇರೆಗೆ ಜನರು ಪ್ರತಿಭಟನೆ ಹಿಂದಕ್ಕೆ ಪಡೆದರು. ಎನ್.ನೀಲಮ್ಮ, ಬಾರಿಕರ ದುರುಗಪ್ಪ, ಜಾಲಮ್ಮ, ಹುಸೇನ್ ಬಾಷಾ, ಶೇಖರಪ್ಪ ಮತ್ತು ಬೋಡರಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-25-1155549670

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.