ಬಳ್ಳಾರಿ: ‘ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಭೂಮಿಯನ್ನು ತೆರವುಗೊಳಿಸುವ ಜಿಲ್ಲಾಡಳಿತದ ಕಾರ್ಯಾಚರಣೆಯನ್ನು ಕಾಂಗ್ರೆಸ್ ವಕ್ತಾರ ವೆಂಕಟೇಶ್ ಹೆಗಡೆ ಶ್ಲಾಘಿಸಿದ್ದಾರೆ. ವಶಕ್ಕೆ ಪಡೆದ ಭೂಮಿಯನ್ನು ಸಾರ್ವಜನಿಕ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ‘ಈಗಾಗಲೇ ₹500 ಕೋಟಿ ಮೌಲ್ಯದ 90 ಎಕರೆ ಜಮೀನು ವಶಪಡಿಸಿಕೊಂಡಿರುವುದು ಸ್ತುತ್ಯಾರ್ಹ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ತೆರವು ಕಾರ್ಯಾಚರಣೆ ಮುಂದುವರಿಸಬೇಕು. ಒತ್ತುವರಿದಾರರ ವಿವರಗಳನ್ನು ಬಹಿರಂಗಪಡಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ, ವಂಚನೆಗೊಳಗಾದ ಬಡವರಿಗೆ ಹಣ ಕೊಡಿಸಬೇಕು’ ಎಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-25-899885548

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.