ಮರಿಯಮ್ಮನಹಳ್ಳಿ: ಪಟ್ಟಣ ಸಮೀಪದ ತಾಳೇಬಸಾಪುರ ತಾಂಡಾದಲ್ಲಿ ಗುರುವಾರ ಸಂಜೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ.

ತಾಂಡಾದ ಶಂಕರ್ ನಾಯ್ಕ್ ಎನ್ನುವರಿಗೆ ಸೇರಿದ ಎತ್ತುಗಳಾಗಿದ್ದು, ಅಂದಾಜು ₹2 ಲಕ್ಷ ನಷ್ಟ ಸಂಭವಿಸಿದೆ.

ಮಧ್ಯಾಹ್ನ 3.30ರ ಸುಮಾರಿಗೆ ಭಾರಿ ಗಾಳಿ, ಗುಡುಗು ಸಮೇತ ಮಳೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ಸಿಡಿಲು ಮರಕ್ಕೆ ಬಡಿದು ಕಣದಲ್ಲಿ ಮರಕ್ಕೆ ಕಟ್ಟಿಹಾಕಿದ್ದ ಎರಡು ಎತ್ತುಗಳು ಬಲಿಯಾಗಿವೆ.

ವಿದ್ಯುತ್ ಅವಗಡ: ನಾಲ್ಕು ಕುರಿ ಸಾವು

ಸಂಡೂರು: ತಾಲ್ಲೂಕಿನ ಚೋರುನೂರು ಹೋಬಳಿಯ ಓಬಳಾಪುರ ಗ್ರಾಮದಲ್ಲಿ ವಿದ್ಯುತ್ ತಂತಿ ತಾಗಿ ಮನೆ, ಕುರಿ ಶೆಡ್ನಲ್ಲಿದ್ದ ನಾಲ್ಕು ಕುರಿಗಳು ಸುಟ್ಟು ಕರಕಲಾದ ಘಟನೆ ಗುರುವಾರ ಜರುಗಿದೆ.

ಓಬಳಾಪುರ ಗ್ರಾಮದಲ್ಲಿನ ನಿವಾಸಿ ಸಣ್ಣ ತಿಪ್ಪೇಸ್ವಾಮಿ ಅವರಿಗೆ ಸೇರಿದ ಮನೆಯಾಗಿದ್ದು, ಮನೆಯ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದು ಮನೆಗೆ ವಿದ್ಯುತ್ ತಂತಿ ತಾಗಿದ್ದರಿಂದ ಬೆಂಕಿ ಉಂಟಾಗಿ ಮನೆ ಸಂಪೂರ್ಣವಾಗಿ ಸುಟ್ಟು ಕುರಿ ಶೆಡ್ನಲ್ಲಿದ್ದ ನಾಲ್ಕು ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ.

ಮನೆಯಲ್ಲಿದ್ದ ದವಸ ಧಾನ್ಯಗಳು ಸೇರಿದಂತೆ ಇತರೆ ವಸ್ತುಗಳು ಸುಟ್ಟಿದ್ದು ಅಂದಾಜು ₹1 ಲಕ್ಷಕ್ಕೂ ಅಧಿಕ ನಷ್ಟವಾಗಿದೆ. ಘಟನಾ ಸ್ಥಳಕ್ಕೆ ಸಂಡೂರಿನ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ತೆರಳಿ ಬೆಂಕಿ ನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-25-1572046798

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.