ಬಳ್ಳಾರಿ: ಜಿಲ್ಲೆಯ ಪಡಿತರ ಕಾರ್ಡ್ದಾರರಿಗೆ ಮೇ ಹಾಗೂ ಜೂನ್ 2026ರ ಪಡಿತರ ವಿತರಣೆ ಪ್ರಾರಂಭವಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಪಿಎಚ್ಎಚ್ ಕಾರ್ಡ್ದಾರರಿಗೆ ಎನ್ಎಫ್ಎಸ್ಎ ಯೋಜನೆಯಡಿ 5 ಕೆ.ಜಿ ಮತ್ತು ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಸೇರಿ ಪ್ರತಿ ಸದಸ್ಯರಿಗೆ ಒಟ್ಟು 10 ಕೆ.ಜಿ ಆಹಾರಧಾನ್ಯ ನೀಡಲಾಗುತ್ತದೆ.ಅಂತ್ಯೋದಯ ಕಾರ್ಡ್ದಾರರಿಗೆ ಎನ್ಎಫ್ಎಸ್ಎ ಯೋಜನೆಯಡಿ 35 ಕೆ.ಜಿ ಆಹಾರಧಾನ್ಯ ನೀಡಲಾಗುತ್ತದೆ.

ಅನ್ನಭಾಗ್ಯ ಹೆಚ್ಚುವರಿ ಪಡಿತರ: ಅಂತ್ಯೋದಯ ಕಾರ್ಡ್ನಲ್ಲಿ 4ಕ್ಕಿಂತ ಹೆಚ್ಚು ಸದಸ್ಯರಿದ್ದಲ್ಲಿ, ಅಂತಹ ಸದಸ್ಯರಿಗೆ ತಲಾ 5 ಕೆ.ಜಿ ಆಹಾರಧಾನ್ಯ ವಿತರಿಸಲಾಗುತ್ತದೆ.

ಮೇ ಮಾಹೆಯಲ್ಲಿ ಮೇ ಮತ್ತು ಜೂನ್ ತಿಂಗಳಿಗೆ ಸಂಬಂಧಿಸಿದ ಕೇವಲ ಎನ್ಎಫ್ಎಸ್ಎ ಆಹಾರಧಾನ್ಯಗಳನ್ನು ಮಾತ್ರ ವಿತರಿಸಲಾಗುತ್ತದೆ. ಜೂನ್ ಮಾಹೆಯಲ್ಲಿ ಮೇ ಮತ್ತು ಜೂನ್ ತಿಂಗಳ ಪಾಲಿನ ಅನ್ನಭಾಗ್ಯ ಯೋಜನೆಯ ಪಡಿತರವನ್ನು ಮಾತ್ರ ವಿತರಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.