ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ ಮೇಯರ್‌, ಉಪಮೇಯರ್‌ ಚುನಾವಣೆ ಜೂನ್ 21ಕ್ಕೆ

Published 12 ಜೂನ್ 2024, 16:08 IST
Last Updated 12 ಜೂನ್ 2024, 16:08 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿ ಪಾಲಿಕೆಯ 23ನೇ ಮೇಯರ್‌ ಮತ್ತು ಉಪ ಮೇಯರ್‌  ಚುನಾವಣೆ ಇದೇ 21ಕ್ಕೆ ನಿಗದಿಯಾಗಿದೆ. 

ಮೇಯರ್‌ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ, ಉಪ ಮೇಯರ್‌ ಸ್ಥಾನ ಬಿಸಿಎ ಮಹಿಳೆಗೆ ಮೀಸಲಾಗಿದೆ. 

ಕಲಬುರಗಿ ವಿಭಾದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷೆತೆಯಲ್ಲಿ 21ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ‌ ಚುನಾವಣೆ ನಡೆಯಲಿದೆ.  

ಇದರ ನಂತರ ಉಪ ಮೇಯರ್‌ ಹಾಗೂ ಸ್ಥಾಯಿ ಸಮಿತಿ ಸದಸ್ಯ ಸ್ಥಾನಗಳಿಗೂ ಚುನಾವಣೆ ನಡೆಯಲಿದೆ.  

ಸದ್ಯ 39 ಸದಸ್ಯಬಲದ ಪಾಲಿಕೆಯಲ್ಲಿ ಕಾಂಗ್ರೆಸ್‌ 21 , ಬಿಜೆಪಿ 13  ಸದಸ್ಯರನ್ನು ಹೊಂದಿದೆ. ಪಕ್ಷೇತರರಾಗಿ ಆಯ್ಕೆಯಾಗಿದ್ದ 5 ಸದಸ್ಯರೂ ಕಾಂಗ್ರೆಸ್‌ ಸೇರಿದ್ದು, ಅದರ ಬಲ 26ಕ್ಕೆ ಏರಿದೆ. 

ಮೂವರು ಆಕಾಂಕ್ಷಿಗಳು: ಸದ್ಯ ಮೇಯರ್‌ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ನಂದೀಶ್‌, ಗಾದೆಪ್ಪ, ಪ್ರಭಂಜನ್‌ ಅವರ ಹೆಸರುಗಳು ಪ್ರಬಲವಾಗಿ ಕೇಳಿ ಬರುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT