ಬಳ್ಳಾರಿ: ‘ನ್ಯಾಯಾಲಯಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಪ್ರಕರಣಗಳ ಹೊರೆ ತಗ್ಗಿಸಲು ಮತ್ತು ಸಾರ್ವಜನಿಕರಿಗೆ ತ್ವರಿತ ನ್ಯಾಯ ಒದಗಿಸಲು ‘ಮಧ್ಯಸ್ಥಿಕೆ' ಪರಿಣಾಮಕಾರಿ ಮಾರ್ಗ’ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ. ಶಾಂತಿ ಅಭಿಪ್ರಾಯಪಟ್ಟರು.

ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಮಧ್ಯಸ್ಥಿಕೆದಾರರಿಗೆ ಮಾರ್ಚ್ 29ರವರೆಗೆ ನಗರದ ಹೊಸ ನ್ಯಾಯಾಲಯದಲ್ಲಿ ಏರ್ಪಡಿಸಿರುವ 40 ಗಂಟೆಗಳ ಮಧ್ಯಸ್ಥಿಕೆ ತರಬೇತಿ ಶಿಬಿರಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಸಾಂಪ್ರದಾಯಿಕ ನ್ಯಾಯಾಲಯದ ಪ್ರಕ್ರಿಯೆಗಿಂತ ಮಧ್ಯಸ್ಥಿಕೆಯು ಭಿನ್ನವಾಗಿದೆ. ಇಲ್ಲಿ ಮಧ್ಯಸ್ಥಿಕೆದಾರರು ಕೇವಲ ಸಮಸ್ಯೆ ಆಲಿಸದೆ, ಉಭಯ ಪಕ್ಷಗಳ ನಡುವೆ ಸೌಹಾರ್ದಯುತ ವಾತಾವರಣ ನಿರ್ಮಿಸಿ ಸಮಸ್ಯೆ ಇತ್ಯರ್ಥಕ್ಕೆ ಅನುವು ಮಾಡಿಕೊಡುತ್ತಾರೆ. ಈ 5 ದಿನಗಳ ತರಬೇತಿಯು ಕೇವಲ ಕಾನೂನು ತಿಳಿವಳಿಕೆಯನ್ನಷ್ಟೇ ನೀಡದೆ, ಮಧ್ಯಸ್ಥಿಕೆದಾರರ ಶಾಂತಿಯುತ ಚಿಂತನೆಯನ್ನು ವೃದ್ಧಿಸಿ ಅವರ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಲಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

‘ಮಧ್ಯಸ್ಥಿಕೆಯಿಂದ ಪ್ರಕರಣಗಳು ಶಾಶ್ವತವಾಗಿ ಇತ್ಯರ್ಥಗೊಳ್ಳುತ್ತವೆ ಮತ್ತು ಮೇಲ್ಮನವಿ ಸಲ್ಲಿಸುವ ಅಗತ್ಯವಿರುವುದಿಲ್ಲ’ ಎಂದು ಅವರು ತಿಳಿಸಿದರು.

ತರಬೇತುದಾರ ಬ್ರಿಂದಾ ನಂದಕುಮಾರ್ ಮಾತನಾಡಿ, ‘ಇಂದಿನ ವೇಗದ ಯುಗದಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಮತ್ತು ಸೌಹಾರ್ದಯುತವಾಗಿ ವಿವಾದಗಳನ್ನು ಬಗೆಹರಿಸಿಕೊಳ್ಳಲು ‘ಮಧ್ಯಸ್ಥಿಕೆ' ಅತ್ಯಂತ ಅವಶ್ಯಕ’ ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮ ಬ್ರಹ್ಮಂ ಮಾತನಾಡಿ,‘ ಪ್ರಸ್ತುತ ನ್ಯಾಯಾಲಯಗಳಿಂದ ಮಧ್ಯಸ್ಥಿಕೆಗೆ ಬರುವ ಪ್ರಕರಣಗಳಲ್ಲಿ ಸುಮಾರು ಶೇ 95 ಪ್ರಕರಣಗಳು ಸರಿಯಾದ ಸಂಧಾನವಾಗದೇ ವಾಪಸ್ ಹೋಗುತ್ತಿವೆ. ಈ ಸ್ಥಿತಿಯನ್ನು ಬದಲಾಯಿಸಿ, ತರಬೇತಿಯ ನಂತರ ವಕೀಲರು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಿದೆ’ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಸೇರಿದಂತೆ ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಮಧ್ಯಸ್ಥಿಕೆದಾರರು, ವಕೀಲರು ಮತ್ತು ನ್ಯಾಯಾಂಗ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-25-222299103

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.