ಬಳ್ಳಾರಿ: ಮಹರ್ಷಿ ವಾಲ್ಮೀಕಿ ವೃತ್ತ ಸಮೀಪದ ಶಾಸಕರ ವಿಶೇಷ ಅನುದಾನದ ಅಡಿ ನಿರ್ಮಾಣ ಮಾಡಲಾಗಿರುವ ಮಳಿಗೆಗಳನ್ನು ಗುರುವಾರ ಶಾಸಕ ನಾರಾ ಭರತ್ ರೆಡ್ಡಿ ಬೀದಿ ಬದಿ ವ್ಯಾಪಾರಿಗಳಿಗೆ ವಿತರಿಸಿದರು.

ಚೀಟಿ ಎತ್ತಿ ಫಲಾನುಭವಿಗಳ ಆಯ್ಕೆ ಮಾಡಿ, ಮಳಿಗೆಗಳನ್ನು ವಿತರಣೆ ಮಾಡಲಾಯಿತು.

ಬಳಿಕ ಬಳ್ಳಾರಿಯ 39ನೇ ವಾರ್ಡ್ ವ್ಯಾಪ್ತಿಯ ನೇತಾಜಿ ನಗರದ ಶ್ರೀಗಣೇಶ ದೇವಸ್ಥಾನದ ಬಳಿ ಅಂದಾಜು ₹80.63 ಲಕ್ಷ ವೆಚ್ಚದಲ್ಲಿ ಒಳ ಚರಂಡಿ ರಿಪೇರಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ವಾರ್ಡ್ ಸಂಖ್ಯೆ 36ರ ವ್ಯಾಪ್ತಿಯ ಅವ್ವಂಬಾವಿ ಕಾಲುವೆ ಬಳಿ ರಸ್ತೆ ಅಭಿವೃದ್ಧಿ, ಮಳೆ ನೀರು ಚರಂಡಿ, ಒಳ ಚರಂಡಿ ಹಾಗೂ ಪೇವರ್ಸ್ ಅಳವಡಿಕೆಗೆ ಅಂದಾಜು ₹2 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಇದೇ ವಾರ್ಡಿನ ಅವ್ವಂಬಾವಿ ಕಾಲುವೆ ಬಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಒಂದು ಕೊಠಡಿಯ ನಿರ್ಮಾಣಕ್ಕಾಗಿ ಅಂದಾಜು ₹16.5 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದೆ.

ಗಡಿಗಿ ಚನ್ನಪ್ಪ ವೃತ್ತ ಬಳಿ ಆಗುತ್ತಿರುವ ಸಂಚಾರ ಸಮಸ್ಯೆಯನ್ನು ಪರಿಶೀಲಿಸಿದರು. ಪಾಲಿಕೆಯ ಆಯುಕ್ತರು, ಅಧಿಕಾರಿಗಳು ಹಾಗೂ ಸಂಚಾರಿ ಪೊಲೀಸರಿಗೆ ಸಲಹೆ, ಸೂಚನೆ ನೀಡಿದರು.

ನಿರ್ಮಾಣ ಹಂತದಲ್ಲಿರುವ ಗುಗ್ಗರಹಟ್ಟಿಯ ಸೇತುವೆ, ರಸ್ತೆಯ ಕಾಮಗಾರಿ ಪರಿಶೀಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-25-1314207633

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.