ಬಳ್ಳಾರಿ: ಮಳೆಗಾಲದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ವಿನಂತಿಸಿದ್ದಾರೆ.

ಮನೆಯ ಸುತ್ತಮುತ್ತಲಿನ ಹೂವಿನ ಕುಂಡ, ಪ್ಲಾಸ್ಟಿಕ್ ಕಪ್ ಹಾಗೂ ಟೈರ್ಗಳಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರಿನ ತೊಟ್ಟಿಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಮುಚ್ಚಬೇಕು. ಕಲುಷಿತ ನೀರಿನಿಂದ ವಾಂತಿ-ಭೇದಿ ಉಂಟಾಗುವ ಸಾಧ್ಯತೆ ಇರುವುದರಿಂದ, ನೀರನ್ನು ಚೆನ್ನಾಗಿ ಕುದಿಸಿ ಆರಿಸಿ ಕುಡಿಯಬೇಕು ಹಾಗೂ ಬಿಸಿಯಾದ ಆಹಾರವನ್ನೇ ಸೇವಿಸಬೇಕು.

ಗುಡುಗು-ಮಿಂಚಿನ ಸಂದರ್ಭದಲ್ಲಿ ಮರಗಳ ಕೆಳಗೆ ನಿಲ್ಲದೆ ತಗ್ಗು ಪ್ರದೇಶದಲ್ಲಿ ಆಶ್ರಯ ಪಡೆಯುವುದು ಸುರಕ್ಷಿತ. ಮಳೆಗಾಲದ ಬದಲಾದ ವಾತಾವರಣದಿಂದ ಅನಾರೋಗ್ಯ ಕಂಡುಬಂದಲ್ಲಿ ಆತಂಕ ಪಡದೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ದಾಸ್ತಾನು ಲಭ್ಯವಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುವಂತೆ ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-25-1954834623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.