ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ: ಮುಲ್ಲಂಗಿ ನಂದೀಶ್ ಮೇಯರ್, ಡಿ. ಸುಕುಂ ಉಪ ಮೇಯರ್‌

Published 21 ಜೂನ್ 2024, 9:06 IST
Last Updated 21 ಜೂನ್ 2024, 9:06 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿ ಪಾಲಿಕೆಯ 23ನೇ ಮೇಯರ್‌ ಆಗಿ ಕಾಂಗ್ರೆಸ್ ನ ಮುಲ್ಲಂಗಿ ನಂದೀಶ್ ಬಾಬು, ಉಪ ಮೇಯರ್‌ ಆಗಿ ಡಿ. ಸುಕುಂ ಶುಕ್ರವಾರ ಆಯ್ಕೆಯಾದರು.

ಮೇಯರ್‌ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ, ಉಪ ಮೇಯರ್‌ ಸ್ಥಾನ ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು.

ಮೇಯರ್ ಮುಲ್ಲಂಗಿ ನಂದೀಶ್ ಪಾಲಿಕೆಯ 18ನೇ ವಾರ್ಡಿನ ಕಾಂಗ್ರೆಸ್ ಸದಸ್ಯ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಆಪ್ತ. ಉಪಮೇಯರ್ ಸುಕುಂ 26ನೇ ವಾರ್ಡ್ ಸದಸ್ಯೆ.

ಮೇಯ‌ರ್ ಸ್ಥಾನಕ್ಕೆ ಬಿಜೆಪಿಯಿಂದ ಶ್ರೀನಿವಾಸ್‌ ಮೋತ್ಕರ್ ಸ್ಪರ್ಧಿಸಿದ್ದರು.

ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆ, ಕಾಂಗ್ರೆಸ್‌ ಅಭ್ಯರ್ಥಿ ಡಿ. ಸುಕುಂ ಅವಿರೋಧ ಆಯ್ಕೆಯಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT