ಬಳ್ಳಾರಿ: ‘ನಗರದಲ್ಲಿ ನಿವಾಸಿ ಕೇಂದ್ರಿತ ಆಧಾರ್ ಸೇವೆಗಳನ್ನು ಮತ್ತಷ್ಟು ಬಲಪಡಿಸಲು ಸುಲಭ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆ ಒದಗಿಸಲು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದಿಂದ ನೂತನ ಆಧಾರ್ ಕೇಂದ್ರ ಆರಂಭಿಸಲಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಹೇಳಿದರು.

ಇಲ್ಗಿನ ಲರದ ನೇತಾಜಿ ನಗರದಲ್ಲಿ ಬುಧವಾರ ನೂತನ ಯುಐಡಿಎಐ ಆಧಾರ್ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ‘ಬಳ್ಳಾರಿಯ ಈ ನೂತನ ಕೇಂದ್ರವು ಆಧುನಿಕ ಸೌಕರ್ಯಗಳನ್ನು ಹೊಂದಿದೆ. ಜನರಿಗೆ ಸುಲಭವಾಗಿ ಸೇವೆಗಳನ್ನು ಒದಗಿಸಲು 4 ಕಾರ್ಯಾಚರಣಾ ಕಿಟ್ಗಳನ್ನು ಹೊಂದಿರುವ ‘ಮಾದರಿ-ಸಿ’ ಕೇಂದ್ರವಾಗಿದೆ. ಇಲ್ಲಿ ಹೊಸ ಆಧಾರ್ ದಾಖಲಾತಿ, ಜನಸಂಖ್ಯಾ ವಿವರಗಳ (ಹೆಸರು, ವಿಳಾಸ ಇತ್ಯಾದಿ) ನವೀಕರಣ, ಬಯೋಮೆಟ್ರಿಕ್ ನವೀಕರಣಗಳು, ದೋಷ ತಿದ್ದುಪಡಿ ಹಾಗೂ ಆಧಾರ್ಗೆ ಸಂಬಂಧಿಸಿದ ಕುಂದುಕೊರತೆಗಳ ಪರಿಹಾರ ಸೇವೆಗಳು ಲಭ್ಯವಿರಲಿವೆ’ ಎಂದರು.

‘ಸಾರ್ವಜನಿಕ ರಜಾದಿನಗಳನ್ನು ಹೊರತುಪಡಿಸಿ, ಈ ಕೇಂದ್ರವು ವಾರದ ಎಲ್ಲಾ ದಿನಗಳಲ್ಲೂ ಸಾರ್ವಜನಿಕರಿಗಾಗಿ ತೆರೆದಿರುತ್ತದೆ. ಯುಐಡಿಎಐ ನೇರ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುವ ಈ ಕೇಂದ್ರವನ್ನು ಸಂಪೂರ್ಣವಾಗಿ ನಿವಾಸಿ ಸ್ನೇಹಿಯಾಗಿ ವಿನ್ಯಾಸ ಮಾಡಲಾಗಿದೆ. ವಿಶೇಷವಾಗಿ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗಾಗಿ ವೀಲ್ಚೇರ್ ಪ್ರವೇಶ (ರ್ಯಾಂಪ್), ಪ್ರತ್ಯೇಕ ವಿಶ್ರಾಂತಿ ಕೊಠಡಿಗಳು ಮತ್ತು ಮೀಸಲಾದ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳನ್ನು ಇಲ್ಲಿ ಅಳವಡಿಸಲಾಗಿದೆ’ ಎಂದರು.

ಕೇಂದ್ರದ ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಎಡಿಸಿ ಝುಬೇರ, ಆಧಾರ್ ಸೇವೆಗಳನ್ನು ಸಾರ್ವಜನಿಕರಿಗೆ ಯಾವುದೇ ತೊಂದರೆಯಿಲ್ಲದೆ ಪರಿಣಾಮಕಾರಿಯಾಗಿ ಒದಗಿಸಲು, ಪ್ರಸ್ತುತ ಅನುಸರಿಸಲಾಗುತ್ತಿರುವ ಆಧಾರ್ ದಾಖಲಾತಿ ಮತ್ತು ನವೀಕರಣ ಕಾರ್ಯವಿಧಾನಗಳ ಕುರಿತು ಮಾಹಿತಿ ಪಡೆದರು.

ಯುಐಡಿಎಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಉಪನಿರ್ದೇಶಕ ಗುಲ್ಶನ್ ಕುಮಾರ್ ಸಿಂಗ್ ಮಾತನಾಡಿ, ‘ಜನರು ಆಧಾರ್ ಸೇವೆಗಳಿಗಾಗಿ ಕೇಂದ್ರದಲ್ಲಿ ಸಾಲಿನಲ್ಲಿ ನಿಲ್ಲುವ ಬದಲು ಆನ್ಲೈನ್ ಮೂಲಕ ಮುಂಗಡ ಅಪಾಯಿಂಟ್ಮೆಂಟ್ ಬುಕ್ ಮಾಡಬಹುದು. 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಮಾಡಿಸಬೇಕಾದ ಬಯೋಮೆಟ್ರಿಕ್ ನವೀಕರಣಗಳನ್ನು ಸೆಪ್ಟೆಂಬರ್ 2026 ರವರೆಗೆ ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದೆ. ಈ ಸೌಲಭ್ಯವು ಆಧಾರ್ ಸೇವಾ ಕೇಂದ್ರಗಳಲ್ಲದೆ, ಆಯಾ ಶಾಲೆಗಳಲ್ಲಿ ಆಯೋಜಿಸಲಾಗುವ ವಿಶೇಷ ಶಿಬಿರಗಳ ಮೂಲಕವೂ ಲಭ್ಯವಿರಲಿದೆ' ಎಂದು ವಿವರಿಸಿದರು.

ಯುಐಡಿಎಐ ಪ್ರಾದೇಶಿಕ ಕಚೇರಿಯ ಸಹಾಯಕ ವ್ಯವಸ್ಥಾಪಕ ಪ್ರಸಾದ್ ಬಾಬು, ಆಧಾರ್ ಕೇಂದ್ರದ ಸಿಬ್ಬಂದಿ ಹಾಗೂ ಸೇವಾ ಪೂರೈಕೆದಾರರಾದ ಎಂ/ಎಸ್ ಬಿಎಲ್ಎಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಯುಐಡಿಎಐ ಅಧಿಕೃತ ಪೋರ್ಟಲ್: https://bookappointment.uidai. gov.in

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-25-2030332039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.