ಮರಿಯಮ್ಮನಹಳ್ಳಿ: ಸಮೀಪದ ಚಿಲಕನಹಟ್ಟಿ ಮತ್ತು 114-ಡಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೈಗೊಂಡ ಕಾಮಗಾರಿಗಳನ್ನು ಮಂಗಳವಾರ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ನೋಂಗ್ಜಾಯ್ ಮಹಮ್ಮದ್ ಅಲಿ ಅಕ್ರಂ ಶಾ ಅವರು ವೀಕ್ಷಿಸಿದರು.

ಇದೇ ಸಂದರ್ಭದಲ್ಲಿ ಅವರು ಕಾಮಗಾರಿ ಸ್ಥಳದಲ್ಲಿನ ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿ, ಕುಡಿಯುವ ನೀರು, ನೆರಳು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೀ ವಿಶೇಷ ಚೇತನರಿಗೆ ಶೇ 60ರ ರಿಯಾಯಿತಿ, ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದರ ಬಗ್ಗೆ ಹಾಗೂ ಕೆಲಸಕ್ಕೆ ಬರುವವರಿಗೆ ಎನ್ಎಂಆರ್ಎಸ್ ತೆಗೆಯಿಸುವಂತೆ ಪಿಡಿಒ ಅವರಿಗೆ ಸೂಚಿಸಿದರು.

ಅಲ್ಲದೆ ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರವಾಗಿ ಕೆಲಸ ಒದಗಿಸಲಾಗುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೂಲಿ ಕಾರ್ಮಿಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ತಾಲ್ಲೂಕು ಪಂಚಾಯಿತಿ ಇಒ ಎಂ.ಡಿ.ಆಲಂಬಾಷಾ, ಸಹಾಯಕ ನಿರ್ದೇಶಕಿ ಕವಿತಾ ಕರ್ಣಂ, ಬಸವರಾಜ, ಪಿಡಿಒಗಳಾದ ಟಿ.ಕೆ.ವೀರಪ್ಪ, ಸೈಯದ್ ಅಲಿ ಮನ್ಸೂರ್, ಎಚ್.ನಾಗರಾಜ್, ಆನಂದ್, ಮಂಜುಳಾ, ಸೋಮಣ್ಣ, ನಾಗರಾಜ, ಶಿವಾನಂದ ಸೇರಿದಂತೆ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-25-1093844047

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.