ಬಳ್ಳಾರಿ: ‘ಪಿಂಚಣಿ ವಿಲೇವಾರಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಈ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ’ ಎಂದು ಬೆಂಗಳೂರಿನ ಉಪ ಮಹಾಲೇಖಪಾಲ (ಪಿಂಚಣಿ ವಿಭಾಗ) ಸಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಬೆಂಗಳೂರಿನ ಮಹಾಲೇಖಪಾಲರ ಕಚೇರಿ ಹಾಗೂ ಖಜಾನೆ ಇಲಾಖೆ (ಬೆಂಗಳೂರು ಮತ್ತು ಬಳ್ಳಾರಿ) ಸಹ ಯೋಗದಲ್ಲಿ ನಗರದ ತಾಲ್ಲೂಕು ಆಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಪಿಂಚಣಿ ಅದಾಲತ್, ಸಾಮಾನ್ಯ ಭವಿಷ್ಯ ನಿಧಿ ಅದಾಲತ್ ಹಾಗೂ ಲೆಕ್ಕಪತ್ರ ಜಾಗೃತಿ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು. ‘ನಿವೃತ್ತ ನೌಕರರು ಪಿಂಚಣಿ ಸೌಲಭ್ಯಗಳಿಗಾಗಿ ಕಚೇರಿಗಳಿಗೆ ಅಲೆಯು ವುದನ್ನು ತಪ್ಪಿಸಲು ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ‘ಈ ಹಿಂದೆ ಪಿಂಚಣಿ ಮಂಜೂರಾತಿಗೆ ಬಹಳ ಸಮಯ ಬೇಕಾಗುತ್ತಿತ್ತು. ಕಳೆದ ಐದಾರು ತಿಂಗಳಿನಿಂದ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದ್ದು, ಗರಿಷ್ಠ 30 ರಿಂದ 45 ದಿನಗಳೊಳಗೆ ಪ್ರಕರಣ ವಿಲೇವಾರಿ ಮಾಡಲು ಪ್ರಯತ್ನಿಸಲಾಗುತ್ತಿದೆ’ ಎಂದರು.

‘ಇಲಾಖೆಯಲ್ಲಿ ಶೇ 50ರಷ್ಟು ಸಿಬ್ಬಂದಿ ಕೊರತೆ ಇದೆ. ಅಧಿಕಾರಿಗಳು ವಾರಾಂತ್ಯದ ರಜೆ ದಿನಗಳಲ್ಲಿ ಕೆಲಸ ಮಾಡಿ ಬಾಕಿ ಪ್ರಕರಣಗಳನ್ನು ವಿಲೇವಾರಿ ಮಾಡಿದ್ದಾರೆ. ಮುಂದಿನ 2-3 ತಿಂಗಳಲ್ಲಿ ವ್ಯವಸ್ಥೆ ಸಂಪೂರ್ಣ ಡಿಜಿಟಲೀಕರಣಗೊಂಡರೆ, ಪಿಂಚಣಿದಾರರು ತಮ್ಮ ಪಿಪಿಒ ಅನ್ನು ಆನ್ಲೈನ್ ಮೂಲಕವೇ ಡೌನ್ಲೋಡ್ ಮಾಡಿಕೊಂಡು ಪಾವತಿಗಾಗಿ ನೇರವಾಗಿ ಖಜಾನೆಗೆ ಸಲ್ಲಿಸಬಹುದು. ಇದರಿಂದ ಅಂಚೆ ಮೂಲಕ ಕಳುಹಿಸುವ ವಿಳಂಬ ತಪ್ಪಲಿದೆ’ ಎಂದು ಅವರು ವಿವರಿಸಿದರು.

ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಮಲ್ಲೇಶಪ್ಪ ಮಾತನಾಡಿ, ‘ಪಿಂಚಣಿ ವಿಲೇವಾರಿಯಲ್ಲಿನ ವಿಳಂಬವನ್ನು ತಪ್ಪಿಸಿ 1 ರಿಂದ 3 ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜೀವಿತ ಪ್ರಮಾಣಪತ್ರ ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಹಾಗೂ ಬ್ಯಾಂಕುಗಳಲ್ಲಿ ಪಿಂಚಣಿದಾರರಿಗಾಗಿ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಬೇಕು’ ಎಂದು ಮನವಿ ಮಾಡಿದರು.

ನಿವೃತ್ತ ನೌಕರರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಇವುಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಸೀನಿಯರ್ ಡಿ.ಎ.ಜಿ ಯಶೋದಾ, ಸೀನಿಯರ್ ಅಕೌಂಟ್ಸ್ ಆಫೀಸರ್ ನಾಗಜ್ಯೋತಿ, ಜಿಲ್ಲಾ ಖಜಾನೆ ಉಪ ನಿರ್ದೇಶಕ ಶೇಖರಪ್ಪ ಸೇರಿದಂತೆ ವಿವಿಧ ಬ್ಯಾಂಕ್ಗಳ ಮುಖ್ಯಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-25-1374340024

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.