ಬಳ್ಳಾರಿ: ‘ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪಿಂಚಣಿದಾರರ ಮತ್ತು ಜಿಪಿಎಫ್ ಚಂದಾದಾರರ ಕುಂದು–ಕೊರತೆಗಳನ್ನು ಆಲಿಸಿ, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮೇ 15ರಂದು ವಿಶೇಷ ಅದಾಲತ್ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕ ತಿಳಿಸಿದ್ದಾರೆ.

‘ಜಿಲ್ಲಾಡಳಿತ ಕಚೇರಿಯ ವಿಡಿಯೊ ಕಾನ್ಫರೆನ್ಸ್ ಹಾಲ್ನಲ್ಲಿ ಬೆಳಿಗ್ಗೆ 11 ಗಂಟೆಗೆ ಪಿಂಚಣಿ ಅದಾಲತ್ ಹಾಗೂ ಮಧ್ಯಾಹ್ನ 2.30ಕ್ಕೆ ಜಿಪಿಎಫ್ ಅದಾಲತ್ ಆಯೋಜಿಸಲಾಗಿದೆ. ಕಲಬುರಗಿ ವಿಭಾಗ ವ್ಯಾಪ್ತಿಯ ಬಳ್ಳಾರಿ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ನಿವೃತ್ತ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು, ಜಿಪಿಎಫ್ ಚಂದಾದಾರರು ಆಯಾ ಜಿಲ್ಲಾಡಳಿತ ಕಚೇರಿಯ ವಿಡಿಯೊ ಕಾನ್ಫರೆನ್ಸ್ ಮೂಲಕವೂ ಭಾಗವಹಿಸಬಹುದು. ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ’ ಎಂದಿದ್ದಾರೆ.

‘ಬೆಂಗಳೂರಿನ ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣೆ ಖಜಾನೆಯ ಹೆಚ್ಚುವರಿ ನಿರ್ದೇಶಕ ಹಾಗೂ ಮಹಾಲೇಖಪಾಲರ ಕಚೇರಿಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಈ ಅದಾಲತ್ ನಡೆಯಲಿದೆ. ಪಿಂಚಣಿ ಪಾವತಿಗೆ ಸಂಬಂಧಿಸಿದಂತೆ ವಿಳಂಬ ಅಥವಾ ಇತರೆ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರು ಅದಾಲತ್ನ ಉಪಯೋಗ ಪಡೆಯಬೇಕು’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-25-1581806116

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.