ಕುಡತಿನಿ (ತೋರಣಗಲ್ಲು): ಪಟ್ಟಣದ ಬಳ್ಳಾರಿ ರಸ್ತೆಯಲ್ಲಿನ ಪೆಟ್ರೋಲ್ ಬಂಕ್ ಬಳಿ ಲಾರಿ, ಬೈಕ್ ನಡುವೆ ಡಿಕ್ಕಿ ಆಗಿದ್ದರಿಂದ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದ, ಗಾಯಾಳುವನ್ನು ಬಳ್ಳಾರಿಯ ವಿಮ್ಸ್‍ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದಾರೆ.
ಕುಡತಿನಿಯ ನಿವಾಸಿ ಯಲ್ಲಪ್ಪ(46) ಮೃತ ವ್ಯಕ್ತಿ. ಮೃತರು ಕಳೆದ ಭಾನುವಾರ ಬೈಕ್ ಮೂಲಕ ಬಳ್ಳಾರಿಯ ಕಡೆಯಿಂದ ಕುಡತಿನಿ ಪಟ್ಟಣಕ್ಕೆ ಆಗಮಿಸುವ ವೇಳೆ ಲಾರಿಯು ರಭಸವಾಗಿ ಬಂದು ಡಿಕ್ಕಿ ಹೊಡೆದಿತ್ತು. ತಲೆ, ಹಣೆ ಹಾಗೂ ಎಡಗಾಲಿಗೆ ಗಂಭೀರವಾಗಿ ಗಾಯಗಳಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತನ ಸಂಬಂಧಿ ಹನುಮೇಶ್ ನೀಡಿದ ದೂರು ಆಧರಿಸಿ ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.