ಬಳ್ಳಾರಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ, ನಾನಾ ಪ್ರಕರಣಗಳಲ್ಲಿ ಕಳುವಾಗಿದ್ದ ವಸ್ತುಗಳನ್ನು ಪತ್ತೆ ಮಾಡಿರುವ ಬಳ್ಳಾರಿ ಜಿಲ್ಲಾ ಪೊಲೀಸರು, ಅವುಗಳನ್ನು ಶನಿವಾರ ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.

ಬಳ್ಳಾರಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವತ್ತುಗಳನ್ನು ಪ್ರದರ್ಶನಕ್ಕೆ ಇಡಲಾಯಿತು. ಅಂದಾಜು ₹2.62 ಕೋಟಿ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು ಎನ್ನಲಾಗಿದ್ದು, ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಪಿ.ಎಸ್.ಹರ್ಷ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕರ್ ವಸ್ತುಗಳನ್ನು, ಅವುಗಳ ವಾರಸುದಾರರಿಗೆ ಹಸ್ತಾಂತರಿಸಿದರು.

ಮನೆ ಕಳವು ಮತ್ತಿತರ ಕಳವು ಪ್ರಕರಣಗಳಲ್ಲಿ ಕಳೆದುಕೊಂಡಿದ್ದ ನಗದು, ಬಂಗಾರದ ಆಭರಣ, ಬೆಲೆ ಬಾಳುವ ಮೊಬೈಲ್ ಫೋನ್ಗಳನ್ನು ಪೊಲೀಸ್ ಅಧಿಕಾರಿಗಳು ಪತ್ತೆ ಮಾಡಿದ್ದು, ಅವುಗಳನ್ನು ಕಳೆದುಕೊಂಡ ಸಾರ್ವಜನಿಕರಿಗೆ ವಿತರಿಸಿದರು. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವರ್ಗದ ಈ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು.

ವಿಶೇಷ ತನಿಖೆ, ತಾಂತ್ರಿಕವಾಗಿ ಮಾಹಿತಿ, ವಿಶೇಷ ಕಾರ್ಯಾಚರಣೆಯ ಮೂಲಕ ಕಳುವಿನ ವಸ್ತುಗಳನ್ನು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವೇಳೆ ಮಾತನಾಡಿದ ಐಜಿಪಿ ಪಿ.ಎಸ್.ಹರ್ಷ, ‘ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕಳುವಾದ ವಸ್ತುಗಳನ್ನು ಪತ್ತೆ ಮಾಡಲು ಕೂಲಂಕುಷ ತನಿಖೆ ನಡೆಸಿ, ನಿರಂತರ ಶ್ರಮಿಸುತ್ತಿದ್ದಾರೆ. ಅಪರಾಧಗಳ ನಿಯಂತ್ರಣದಲ್ಲಿ ಹಾಗೂ ಅಪರಾಧಿಗಳ ಪತ್ತೆಯಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಯಾವುದೇ ಸಂಶಯಾಸ್ಪದ ವ್ಯಕ್ತಿಗಳು, ಚಟುವಟಿಕೆಗಳು ಕಂಡು ಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

ಬಳ್ಳಾರಿ ಜಿಲ್ಲಾ ಹೆಚ್ಚುವರಿ ಎಸ್.ಪಿ. ನವೀನ್ಕುಮಾರ್ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-25-638715649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.