ಬಳ್ಳಾರಿ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕದಡುವ ರೀತಿಯ ಚಟುವಟಿಕೆಗಳಲ್ಲಿ ತೊಡಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೇಕರ್ ಎಚ್ಚರಿಕೆ ನೀಡಿದರು.

ನಗರದ ಡಿಆರ್ ಮೈದಾನದಲ್ಲಿ ಶುಕ್ರವಾರ ನಡೆದ ಮನೆಗಳ್ಳತನ ಆರೋಪಿಗಳು ಮತ್ತು ರೌಡಿಶೀಟರ್ಗಳ ಪರೇಡ್ನಲ್ಲಿ ಮಾತನಾಡಿದ ಅವರು, ‘ಸಾರ್ವಜನಿಕರಲ್ಲಿ ಭಯ ಹುಟ್ಟಿಸುವುದು, ಗಲಾಟೆ, ದಬ್ಬಾಳಿಕೆ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದರೆ ಯಾವುದೇ ಮೂಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.

ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಮಾಜಘಾತುಕ ಚಟುವಟಿಕೆಗಳಿಂದ ದೂರವಿದ್ದು ಸಾಮಾನ್ಯ ಜೀವನ ನಡೆಸುವಂತೆ ಸೂಚಿಸಿದರು. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುಮನ್, ‘ನಗರದಲ್ಲಿ ಕಳ್ಳತನ ಪ್ರಕರಣಗಳು ಕಂಡು ಬರುತ್ತಿವೆ. ಹೀಗಾಗಿ ಕಳ್ಳತನ ಪ್ರವೃತ್ತಿಯುಳ್ಳವರ ಪರೇಡ್ ನಡೆಸಲಾಗಿದೆ. ಅವರಿಗೆ ಎಚ್ಚರಿಕೆ ನೀಡಿ, ಮಾಹಿತಿ ಸಂಗ್ರಹ ಮಾಡಲಾಗಿದೆ. ನಗರದಲ್ಲಿ ಸಿಸಿಟಿವಿ ಅಳವಡಿಕೆಗೂ ಗಮನ ನೀಡಲಾಗುತ್ತಿದೆ. 118 ಕ್ಯಾಮೆರಾಗಳನ್ನು ಅಳವಡಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಡ್ರೋಣ್ಗಳ ಖರೀದಿ ಮಾಡಲಾಗುತ್ತಿದೆ. ಇವುಗಳ ಮೂಲಕ ನಾವು ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸಲಿದ್ದೇವೆ’ ಎಂದರು.

‘ನಗರದಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ ಮಾಡಲಾಗಿದೆ. ಈ ಉದ್ದೇಶಕ್ಕೆ ಮನೆಗಳನ್ನು ಬಾಡಿಗೆ ನೀಡಿದವರ ಮೇಲೂ ಕ್ರಮ ಕೈಗೊಳ್ಳಲು ಪ್ರಕ್ರಿಯೆ ನಡೆಯುತ್ತಿದೆ’ ಎಂದರು.

ಜೂನ್ 1ರ ಬಳಿಕ ಹೆಲ್ಮೆಟ್ ಕಡ್ಡಾಯ ಜಾರಿಯಾಗಲಿದೆ ಎಂದೂ ಇದೇ ವೇಳೆ ತಿಳಿಸಿದರು.

ವಿವಿಧ ಪೊಲೀಸ್ ಠಾಣೆಗಳ ಎಂಒಬಿ ಶೀಟರ್ಗಳು ಹಾಗೂ ರೌಡಿಶೀಟರ್ಗಳು ಪರೇಡ್ನಲ್ಲಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-25-2057238032

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.