ಬಳ್ಳಾರಿ: ‘ಹೊಸ ಸರ್ಕಾರದಲ್ಲಿ ಶಾಸಕ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಹಾಗೂ ಜಿಲ್ಲೆಯ ಶಾಸಕರ ಅಭಿಪ್ರಾಯ’ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಬಳ್ಳಾರಿಯ ಮಹಾನಗರ ಪಾಲಿಕೆಯಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ‘ಸಿಎಂ ಬದಲಾವಣೆಗೆ ಸಂಬಂಧಿಸಿ ಹೈಕಮಾಂಡ್ ಸೂಚನೆಯಂತೆ ನಾನು ನಡೆದುಕೊಳ್ಳುತ್ತೇನೆ’ ಎಂದರು.

ಹೊಸ ಮುಖ್ಯಮಂತ್ರಿ ಮತ್ತು ಮಂತ್ರಿಮಂಡಲ ರಚನೆಯಲ್ಲಿ ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರ ತೀರ್ಮಾನವೇ ಅಂತಿಮ. ಅವರು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ’ ಎಂದರು.

ಕಾಂಗ್ರೆಸ್ ಮುಖಂಡ ಅಯಾಜ್ ಅಹ್ಮದ್, ಸುಬ್ಬರಾಯುಡು, ಮೊಹಮ್ಮದ್, ಡಿ.ಸೂರಿ, ಬಿಆರೆಲ್ ಸೀನಾ, ಅಲ್ಲಾಬಕಾಷ್, ಹೊನ್ನಪ್ಪ, ಕಣೇಕಲ್ ಮೆಹಬೂಬಸಾಬ, ಪಾಲಿಕೆಯ ಸದಸ್ಯ ಜಬ್ಬಾರ್ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-25-71471451

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.