ಬಳ್ಳಾರಿ: ಹೊಟ್ಟೆನೋವಿನ ಚಿಕಿತ್ಸೆಗಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ಬಿಎಂಸಿಆರ್ಸಿ–ವಿಮ್ಸ್)ಕ್ಕೆ ದಾಖಲಾಗಿದ್ದ ಬಳ್ಳಾರಿ ಕೇಂದ್ರ ಕಾರಾಗೃಹದ ಸಜಾಬಂಧಿ ಹನುಮಂತು (25) ಎಂಬುವರು ಮೃತಪಟ್ಟಿದ್ದಾರೆ.

‘ಪೋಕ್ಸೊ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ, ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಸಂಕನಾಳು ಗ್ರಾಮದ ಹನುಮಂತುನನ್ನು ಜನವರಿಯಲ್ಲಿ ರಾಯಚೂರು ಜಿಲ್ಲೆಯಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಏಪ್ರಿಲ್ 29ರಂದು ಹೊಟ್ಟೆನೋವು ಉಲ್ಭಣಿಸಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಈ ವಿಷಯವನ್ನು ನಮಗೆ ಪೊಲೀಸರು ತಿಳಿಸಲಿಲ್ಲ. ನಿರ್ಲಕ್ಷ್ಯ ತೋರಿದ್ದಾರೆ’ ಎಂದು ಕುಟುಂಬಸ್ಥರು ಆರೋಪಿಸಿದರು.

‘ನಮ್ಮ ಅಣ್ಣ ಮೃತಪಟ್ಟನೆಂದು ಮೇ 6ರಂದು ರಾತ್ರಿ 12ರ ಸುಮಾರಿಗೆ ಪೊಲೀಸರು ಕರೆ ಮಾಡಿ ಮಾಹಿತಿ ನೀಡಿದ್ದಾರೆ’ ಎಂದು ತಂಗಿ ಮರಿಯಮ್ಮ ತಿಳಿಸಿದರು. ಲಿವರ್ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಗರದ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರಿಯಮ್ಮನಹಳ್ಳಿ: ಸಮೀಪದ 114 ಡಣಾಪುರ ಬಳಿಯ ಬಿಎಂಎಂ ಇಸ್ಪಾತ್ ಕಂಪನಿಯ ಕಾರ್ಖಾನೆಯಲ್ಲಿ ಬಿಸಿಯಾದ ದ್ರವ ಸಿಡಿದು ತೀವ್ರವಾಗಿ ಗಾಯಗೊಂಡಿದ್ದ ಕಾರ್ಮಿಕ, ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.

ಒಡಿಶಾ ಮೂಲದ ಕಾರ್ಮಿಕ ಲಾಲ್ ತೆಂಡು ಜೇನಾ (33) ಮೃತರು. ಈ ಕುರಿತು ಕಂಪನಿಯ ನಾಲ್ಕು ಜನರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-25-880995272

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.