ಕುರುಗೋಡು: ಬಸವ ಕಲ್ಯಾಣದಲ್ಲಿ ಬಸವಣ್ಣನವರ ಪಕ್ಕದಲ್ಲಿ ಹಡಪದ ಅಪ್ಪಣ್ಣ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಒತ್ತಾಯಿಸಿ ತಾಲ್ಲೂಕು ಶಿವ ಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ತಹಶೀಲ್ದಾರ್ ನರಸಪ್ಪ ಅವರಿಗೆ ಮಂಗಳವಾರ ಸಲ್ಲಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಪಂಪಾಪತಿ ಮಾತನಾಡಿ, ‘ಬಸವ ಕಲ್ಯಾಣದ ಅನುಭವ ಮಂಟಪದ ತ್ರಿಪುರಾಂತಕ ಕೆರೆಯ ಬಳಿ ಯ ಅರಿವಿನ ಗುಹೆ ಯಲ್ಲಿ ವಿಶ್ವಗುರು ಬಸವಣ್ಣ ಅವರ ಪಕ್ಕದಲ್ಲಿ ಹಡಪದ ಅಪ್ಪಣ್ಣ ಅವರ ಮೂರ್ತಿ ಬದಲು ಶಿವಶರಣೆ ಲಿಂಗಮಾತೆ ಅವರ ಮೂರ್ತಿ ಸ್ಥಾಪನೆ ಮಾಡಿದ್ದಾರೆ. ಇದರಿಂದ ಸಮುದಾಯಕ್ಕೆ ತೀವ್ರ ನೋವುಂಟಾಗಿದೆ’ ಎಂದರು.

‘ಸರ್ಕಾರ ಮಧ್ಯಪ್ರವೇಶಿಸಿ ಬಸವಣ್ಣನವರ ಪಕ್ಕದಲ್ಲಿ ಹಡಪದ ಅಪ್ಪಣ್ಣ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಿ ನಮ್ಮ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಬೇಕು’ ಎಂದು ಒತ್ತಾಯಿಸಿದರು.

‘ಸಮಾಜಕ್ಕೆ ನ್ಯಾಯದೊರಕಿಸಿಕೊಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು

ಮನವಿ ಸ್ವೀಕರಿಸಿದ ನರಸಪ್ಪ ತಹಶೀಲ್ದಾರ್, ಮನವಿಯನ್ನು ಸರ್ಕಾರಕ್ಕೆ ಕಳುಹಿಸುವುದಾಗಿ ತಿಳಿಸಿದರು.

ಸಂಘದ ಪದಾಧಿಕಾರಿಗಳಾದ ಎಚ್.ಮಂಜುನಾಥ, ಎಚ್.ಶೇಖ ರಪ್ಪ, ಎಚ್.ನಾಗರಾಜ, ಶೇಖರಪ್ಪ, ಎಚ್.ವೀರೇಶ್ ಮತ್ತು ಎಚ್.ರಾಜಶೇಖರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-25-1134103187

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.