ಬಳ್ಳಾರಿ: ಮುಂಗಾರು ಅವಧಿಯಲ್ಲಿ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ಮತ್ತು ಭಾರೀ ಮಳೆಯ ಹಾನಿ ತಡೆಗಟ್ಟಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದಿನ ಒಂದು ವಾರ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿದೆ ಎಂದರು. ಸ್ಥಳೀಯ ಸಂಸ್ಥೆಗಳು ಚರಂಡಿ, ನಾಲಾಗಳ ಹೂಳು ತೆಗೆಯಬೇಕು. ಜಿಲ್ಲಾ ಮಟ್ಟದ ‘ತುರ್ತು ಕಾರ್ಯಾಚರಣೆ ಕೇಂದ್ರ’ ಸಕ್ರಿಯವಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆ ರಕ್ಷಣಾ ತಂಡಗಳನ್ನು ಸಿದ್ಧವಾಗಿಡಬೇಕು ಎಂದು ಸೂಚಿಸಿದರು.

ಅಪಾಯಕಾರಿ ಮನೆಗಳು, ಶಿಥಿಲಗೊಂಡ ಶಾಲೆ ಹಾಗೂ ಅಂಗನವಾಡಿಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಡಿಸಿ ತಿಳಿಸಿದರು. ಮುಂಗಾರು ಪೂರ್ವ ಮಳೆಯಿಂದಾದ ಹಾನಿಗೆ ತಕ್ಷಣ ಪರಿಹಾರ ನೀಡಬೇಕು. ಜಂಟಿ ಸಮೀಕ್ಷೆ ನಡೆಸಿ ಮನೆ ಹಾನಿ ಪರಿಹಾರ ಬಿಡುಗಡೆ ಮಾಡಬೇಕು. ಮಳೆಯಿಂದ ವಿದ್ಯುತ್ ಕಂಬ ಉರುಳಿದರೆ 6 ರಿಂದ 12 ಗಂಟೆಗಳಲ್ಲಿ ವಿದ್ಯುತ್ ಮರುಸ್ಥಾಪಿಸಬೇಕು. ಕೃಷಿ ಇಲಾಖೆಯು ರೈತರಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜೆಸ್ಕಾಮ್ ಹಾಗೂ ಕೃಷಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಯಾವುದೇ ಅಧಿಕಾರಿ ಕೇಂದ್ರ ಸ್ಥಾನ ಬಿಟ್ಟು ಹೋಗಬಾರದು, ನಿರ್ಲಕ್ಷ್ಯ ವಹಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಸಭೆಯಲ್ಲಿ ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್, ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್ ಝುಬೇರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-25-1048615929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.