ಬಳ್ಳಾರಿ: ‘ನೈಸರ್ಗಿಕ ವಿಕೋಪ ಮತ್ತು ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಯಾವುದೇ ವಿಳಂಬ ಧೋರಣೆ ತೋರಬಾರದು’ ಎಂದು ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಹೊಸ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆಯಿಂದ ಹಾನಿಗೊಳಗಾದ ಮನೆಗಳ ಮಾಲೀಕರಿಗೆ ತಕ್ಷಣವೇ ಸರ್ಕಾರಿ ಸೌಲಭ್ಯ ಒದಗಿಸಬೇಕು. ಜಾನುವಾರು ಮೃತಪಟ್ಟ ದಿನವೇ ಮರಣೋತ್ತರ ಪರೀಕ್ಷೆ ವರದಿ ಸಿದ್ಧಪಡಿಸಿ, ವಿಳಂಬವಿಲ್ಲದೆ ಪರಿಹಾರ ಪಾವತಿಸಬೇಕು. ರೈತರನ್ನು ಅಲೆದಾಡಿಸುವುದು ಸರಿಯಲ್ಲ ಎಂದು ತಿಳಿಸಿದರು.

ಯಾವುದೇ ಪ್ರದೇಶದಲ್ಲಿ ನೀರಿನ ಅಭಾವ ಉಂಟಾಗದಂತೆ ಜಿಲ್ಲಾ ಪಂಚಾಯಿತಿ ಮತ್ತು ಪೌರಾಡಳಿತ ಜಂಟಿ ಯೋಜನೆ ರೂಪಿಸಬೇಕು. ಖಾಸಗಿ ಕೊಳವೆಬಾವಿ ಮತ್ತು ಟ್ಯಾಂಕರ್ಗಳನ್ನು ಮುಂಜಾಗ್ರತಾ ಕ್ರಮವಾಗಿ ಗುರುತಿಸಿಕೊಳ್ಳಬೇಕು. ಶುದ್ಧೀಕರಣ ಘಟಕಗಳ (ಆರ್ಒ ಪ್ಲಾಂಟ್) ವಿದ್ಯುತ್ ಬಿಲ್ ಗೊಂದಲ ಇತ್ಯರ್ಥಪಡಿಸಿ, ಸರಿಯಾದ ನಿರ್ವಹಣೆ ಮಾಡಬೇಕು. ಇನ್ನು ಮುಂದೆ ಸಿಎಸ್ಆರ್ ಅಡಿ ಹೊಸ ಪ್ಲಾಂಟ್ ಸ್ಥಾಪನೆಗೆ ಪೂರ್ವಾನುಮತಿ ಕಡ್ಡಾಯ ಎಂದು ಅವರು ಸಭೆಗೆ ತಿಳಿಸಿದರು.

ಜಾಗೃತಿ ಮೂಡಿಸುವಿಕೆ: ಸಿಡಿಲು ಮತ್ತು ಮಿಂಚಿನಿಂದ ರಕ್ಷಿಸಿಕೊಳ್ಳಲು ಗ್ರಾಮ ಸಭೆ ಹಾಗೂ ‘ಟಾಮ್ ಟಾಮ್’ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಅಧಿಕಾರಿಗಳಿಗೆ ತಿಳಿಸಿದರು.

ರಾಜಕಾಲುವೆಗಳ ಹೂಳು ತೆಗೆಯಬೇಕು. ವಿದ್ಯುತ್ ಕಂಬಗಳು ಬಿದ್ದಲ್ಲಿ ತಕ್ಷಣ ಮರುಸ್ಥಾಪಿಸಬೇಕು ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೇರ್, ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಹಶೀಲ್ದಾರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-25-731004658

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.