ಬಳ್ಳಾರಿ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಸಂಸದ ಈ. ತುಕಾರಾಂ ಅವರ ಕಚೇರಿ ಎದುರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಜಾರಿಗೆ ಒತ್ತಾಯಿಸಿ ಸಿಪಿಐ(ಎಂ) ಪಕ್ಷದಿಂದ ಸೋಮವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ಬಳಿಕ ಸಂಸದ ಈ. ತುಕಾರಾಂ ಮನವಿ ಪತ್ರ ಸಲ್ಲಿಸಿ, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆ ಆಧಾರದ ಮೇಲೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ನ್ಯಾ. ಎಚ್.ಎನ್. ನಾಗಮೋಹನ ದಾಸ್ ಆಯೋಗವು ನೀಡಿದ ವರದಿಯ ಪ್ರಕಾರ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಹಾಗೂ ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಲಾಗಿದೆ. ಈ ವರದಿಯನ್ನು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ.

ಕರ್ನಾಟಕ ವಿಧಾನಸಭೆಯ ಈ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿ, ಸಂವಿಧಾನದ 9ನೇ ಅನುಬಂಧಕ್ಕೆ ಸೇರಿಸುವಂತೆ ಒತ್ತಾಯಿಸಲಾಯಿತು.

ಇದೇ ವೇಳೆ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಸಿಪಿಐ(ಎಂ) ಮನವಿ ಮಾಡಲಾಯಿತು. ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಜೆ. ಸತ್ಯಬಾಬು, ಎಚ್. ತಿಪ್ಪಯ್ಯ, ಜೆ. ಚಂದ್ರಕುಮಾರಿ, ವಿ.ಎಸ್. ಶಿವಶಂಕರ್, ಜೆ. ಚೆನ್ನಬಸಯ್ಯ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-25-597305794

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.