ಬಳ್ಳಾರಿ: ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ ದಾಳಿ ಮಾಡಿದ್ದಾನೆ. ಘಟನೆಯಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಆರು ಮಂದಿ ಗಾಯಗೊಂಡಿದ್ದಾರೆ.

ಮೃತ ಬಾಲಕನನ್ನು ಆಂಧ್ರ ಪ್ರದೇಶದ ಅದವಾನಿಯ ಹೇಮಂತ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ (ವಿಮ್ಸ್) ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. ಇವರೆಲ್ಲರೂ 9ನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ಮಲಗಿದ್ದರು. ಈ ವೇಳೆ ಆರೋಪಿತ ವಿದ್ಯಾರ್ಥಿ ಮಂಚದ ರಾಡ್, ಸ್ಕ್ರೂ ಡ್ರೈವರ್ ಹಾಗೂ ರೇಡಿಯಮ್ ಕಟರ್, ಚಾಕುವಿನಿಂದ ಸಹಪಾಠಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾನೆ.

ವಿಮ್ಸ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಮೃತ ಬಾಲಕನ ತಂದೆ ಲಕ್ಷ್ಮೀಕಾಂತ, 'ತಡರಾತ್ರಿ ಹಾಸ್ಟೆಲ್ನಿಂದ ಕರೆ ಬಂತು. ನಿಮ್ಮ ಮಗ ಗಂಭೀರಗೊಂಡಿದ್ದಾನೆ ಎಂದು ತಿಳಿಸಲಾಯಿತು. ಬಳ್ಳಾರಿಗೆ ಬಂದು ನೋಡಿದಾಗ ಮಗ ಮೃತಪಟ್ಟಿದ್ದ' ಎಂದು ತಿಳಿಸಿದ್ದಾರೆ.

ಬ್ರೂಸ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.