ಬಳ್ಳಾರಿ: ರಾಜಕಾಲುವೆ ಒತ್ತುವರಿ ಮಾಡಿ, ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದ ಎದುರಿಸುತ್ತಿರುವ ಪಾಲಿಕೆಯ 7ನೇ ವಾರ್ಡ್ನ ಪಾಲಿಕೆ ಸದಸ್ಯೆ ಉಮಾದೇವಿ ಪತಿ ಶಿವರಾಜ್ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ರಸ್ತೆ ಅಗಲೀಕರಣದ ವೇಳೆ ತಮಗೆ ನೀಡಿದ್ದ ಆಶ್ವಾಸನೆ ಈಡೇರಿಸಿಲ್ಲ ಜನ ಆರೋಪಿಸಿದ್ದಾರೆ.

7 ಮತ್ತು 8ನೇ ವಾರ್ಡ್ಗೆ ಹೊಂದಿಕೊಂಡಿರುವ ರಸ್ತೆ ಅಗಲೀಕರಣ ಕಾಮಗಾರಿಗಾಗಿ ಕಳೆದ ವರ್ಷ ರಸ್ತೆಯ ಒಂದು ಬದಿಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಮನೆಗಳನ್ನು ತೆರವುಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಪರ್ಯಾಯ ನಿವೇಶನ ಒದಗಿಸುವುದಾಗಿ ಶಿವರಾಜ್ ಭರವಸೆ ನೀಡಿದ್ದರು ಎಂದು ನಿವಾಸಿಗಳು ತಿಳಿಸಿದ್ದಾರೆ.

ಆದರೆ ಒಂದು ವರ್ಷ ಕಳೆದರೂ ವಸತಿ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿರುವ ಕುಟುಂಬಗಳು, ಇದೀಗ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಲು ಮುಂದಾದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿವೆ. ‘ಪರ್ಯಾಯ ನಿವೇಶನ ನೀಡುವವರೆಗೆ ರಸ್ತೆ ಕಾಮಗಾರಿ ನಡೆಸಲು ಅವಕಾಶ ನೀಡುವುದಿಲ್ಲ’ ಎಂದು ಸಂತ್ರಸ್ತರು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಜಿಲ್ಲಾಡಳಿತ ವಶಕ್ಕೆ ಪಡೆದಿರುವ ಹಳ್ಳದ ಜಮೀನಿನಲ್ಲೇ ನಿವೇಶನ ನೀಡುವುದಾಗಿ ಕಾಂಗ್ರೆಸ್ ಮುಖಂಡ ಶಿವರಾಜ್ ಈ ಹಿಂದೆ ಜನರಿಗೆ ಆಶ್ವಾಸನೆ ನೀಡಿದ್ದು ಎನ್ನಲಾಗಿದೆ. ಆದರೆ ಆ ಜಾಗವನ್ನು ಈಗ ಜಿಲ್ಲಾಡಳಿತ ಒತ್ತುವರಿ ಪ್ರದೇಶವೆಂದು ಗುರುತಿಸಿ ತೆರವುಗೊಳಿಸಿದೆ. ಸುರಕ್ಷಿತ ಹಾಗೂ ಕಾನೂನುಬದ್ಧ ಪರ್ಯಾಯ ನಿವೇಶನ ಒದಗಿಸಬೇಕು. ಇಲ್ಲವಾದರೆ ರಸ್ತೆ ಕಾಮಗಾರಿಯನ್ನು ತಡೆಯಲಾಗುವುದು ಎಂದು ಸಂತ್ರಸ್ತ ಕುಟುಂಬಗಳು ಹೇಳಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-25-861880235

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.