ಬಳ್ಳಾರಿ: ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಸಂಚಾರ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಎಲ್ಲಾ ವಾಹನ ಚಾಲಕರು ನಿಧಾನವಾಗಿ ವಾಹನ ಚಲಾಯಿಸಬೇಕು ಎಂದು ಬಳ್ಳಾರಿಯ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

2026ನೇ ಸಾಲಿನ ರಸ್ತೆ ಸಂಚಾರ ಸಮೀಕ್ಷೆಯು ಫೆ.26ರ ಬೆಳಿಗ್ಗೆ 6 ರಿಂದ ಫೆ.28ರ ಬೆಳಿಗ್ಗೆ 6 ಗಂಟೆಯವರೆಗೆ 3 ದಿನ ನಡೆಯಲಿದೆ. ಇದಕ್ಕಾಗಿ ರಸ್ತೆಗಳ ಮೇಲೆ ಕ್ಯಾಮೆರಾ ಸಮೇತ ಸಮೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.

ಸಮೀಕ್ಷಾ ಕೇಂದ್ರಗಳಿದ್ದಲ್ಲಿ ‘ವಾಹನ ರಸ್ತೆ ಸಂಚಾರ ಸಮೀಕ್ಷೆ ಕೇಂದ್ರವಿದೆ, ತಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ’ ಎಂದು ಸೂಚನಾ ಫಲಕಗಳನ್ನು ಅಳವಡಿಸಲಾಗಿರುತ್ತದೆ.

ಈ ಸಮೀಕ್ಷೆಯಿಂದ ಸಂಗ್ರಹಿಸಿದ ಮಾಹಿತಿಯಿಂದ ಸರ್ಕಾರಕ್ಕೆ ರಸ್ತೆಗಳ ಸಂಚಾರ ತೀವ್ರತೆ ಕಂಡುಹಿಡಿಯುವುದಕ್ಕೆ ರಸ್ತೆಗಳ ಅಗಲ ಅಳತೆ ನಿರ್ಧರಿಸಲು, ರಸ್ತೆಗಳ ಮೇಲ್ದರ್ಜೆಗೇರಿಸಲು ಹಾಗೂ ರಸ್ತೆಗಳ ಸ್ಥಿತಿಗತಿ ಸುಧಾರಿಸಲು ಅನುಕೂಲವಾಗುತ್ತದೆ.

ರಸ್ತೆ ಸಂಚಾರ ಸಮೀಕ್ಷೆಯನ್ನು ಯಶಸ್ವಿಯಾಗಿಸಲು ವಾಹನ ಚಾಲಕರು ಮತ್ತು ಸಾರ್ವಜನಿಕರು ತಮ್ಮ ವಾಹನಗಳನ್ನು ನಿಧಾನವಾಗಿ ಚಲಾಯಿಸಿ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.