ಬಳ್ಳಾರಿ: ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಲ್ಲಿ ದಾಖಲಾಗಿರುವ ಅಪರಾಧ ಪ್ರಕರಣಗಳ ಮಾಹಿತಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ್ದು, ಸಂಡೂರು ತಾಲ್ಲೂಕಿನಲ್ಲಿ ಮೂರು ಪೋಕ್ಸೊ ಪ್ರಕರಣ ದಾಖಲಾಗಿದೆ.

ಚೋರನೂರು ಠಾಣೆ ವ್ಯಾಪ್ತಿಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಹೊನ್ನೂರು ಸ್ವಾಮಿ ಎಂಬಾತ ತಲೆಮರೆಸಿಕೊಂಡಿದ್ದು, ಪೊಲೀಸರು ಪತ್ತೆ ಕಾರ್ಯ ಮುಂದುವರಿಸಿದ್ದಾರೆ.

ಸಂಡೂರು ಠಾಣೆ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಅನಂತಕುಮಾರ ಎಂಬಾತನನ್ನು ಬಂಧಿಸಲಾಗಿದೆ. ಈತನ ಮೇಲೆ ಪೋಕ್ಸೊ ಹಾಗೂ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ವಂಚನೆ: ಬಳ್ಳಾರಿ ತಾಲ್ಲೂಕಿನ ಬಿಸಿಲಹಳ್ಳಿ ಗ್ರಾಮದ ಮಂಜುನಾಥ್ ಎಂಬುವವರಿಗೆ ಫೇಸ್ಬುಕ್ ಮೂಲಕ ಸಂಪರ್ಕಿಸಿದ ಅಪರಿಚಿತ ವ್ಯಕ್ತಿಯೊಬ್ಬರು, ‘ಪಿಎಂ-ಮುದ್ರಾ’ ಯೋಜನೆ ಅಡಿಯಲ್ಲಿ ಶೇ 30ರಷ್ಟು ಸಬ್ಸಿಡಿಯೊಂದಿಗೆ ₹20 ಲಕ್ಷ ಸಾಲ ಕೊಡಿಸುವುದಾಗಿ ನಂಬಿಸಿ, ವಂಚಿಸಿದ್ದಾರೆ. ಸಂತ್ರಸ್ತರಿಂದ ಯುಪಿಐ ಮೂಲಕ ಒಟ್ಟು ₹2,34,139 ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ಬಳ್ಳಾರಿ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಲ್ಲಿ ವೃದ್ಧ ಸಾವು: ಮೇ 10ರಂದು ಮಧ್ಯಾಹ್ನ ತೆಕ್ಕಲಕೋಟೆ-ಸಿರಿಗೇರಿ ರಸ್ತೆಯಲ್ಲಿ ಸಂಭವಿಸಿದ ಆಟೊ ಅಪಘಾತದಲ್ಲಿ ಅಂಜಿನಪ್ಪ (65) ಎಂಬುವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಸ್ಫೋಟಕ: ಕುರುಗೋಡು ಸಮೀಪದ ದಮ್ಮೂರು ಗ್ರಾಮದ ಹೊಲವೊಂದರಲ್ಲಿ ಪರವಾನಗಿ ಇಲ್ಲದೆ ಬಂಡೆ ಸ್ಫೋಟಿಸಲು ಸಿದ್ಧತೆ ನಡೆಸಿದ್ದ ಕವಿರಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ, ಸ್ಫೋಟಕಗಳನ್ನು ಜಪ್ತು ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-25-2069124574

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.