ಬಳ್ಳಾರಿ: ಬಳ್ಳಾರಿಯ ಖಾಸಗಿ ವಸತಿ ಶಾಲೆಯಲ್ಲಿ ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಒಬ್ಬನ ಸಾವಿಗೆ ಕಾರಣವಾದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಪೊಲೀಸರು ಸೋಮವಾರ ತಮ್ಮ ಸುಪರ್ದಿಗೆ ಪಡೆದಿದ್ದಾರೆ.

ಬಾಲಕನು ಹತಾಶೆಯಿಂದ ಈ ಕೃತ್ಯವೆಸಗಿರುವುದು ಗೊತ್ತಾಗಿದೆ. ಆತನನ್ನು ನಗರದ ಶ್ರೀರಾಮಪುರ ಕಾಲೊನಿಯ ರೂಪನಗುಡಿ ರಸ್ತೆಯಲ್ಲಿ ವಶಕ್ಕೆ ಪಡೆಯಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹಾಸ್ಟೆಲ್ ವಾತಾವರಣ ತನಗೆ ಸಹ್ಯವಾಗಿರಲಿಲ್ಲ ಎಂದು ಬಾಲಕ ಪ್ರಾಥಮಿಕ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

‘ಬಾಲಕನ ವಿಚಾರಣೆಯನ್ನು ಅತ್ಯಂತ ಎಚ್ಚರಿಕೆಯಿಂದ ಮಾಡುತ್ತಿದ್ದೇವೆ. ಇದಕ್ಕಾಗಿ ವೈದ್ಯಕೀಯ ತಜ್ಞರು, ಅಧಿಕಾರಿಗಳ ತಂಡ ರಚನೆ ಮಾಡಿಕೊಳ್ಳುತ್ತಿದ್ದೇವೆ. ಇದರಲ್ಲಿ ಪೊಲೀಸರು, ಮಾನಸಿಕ ತಜ್ಞರು, ವೈದ್ಯರು, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಇರಲಿದ್ದಾರೆ. ಈ ಬಗ್ಗೆ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ವಿಮ್ಸ್) ಜತೆಗೆ ಮಾತನಾಡಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ ತಿಳಿಸಿದರು.

‘ಘಟನೆಗೆ ಕಾರಣವೇನು ಎಂಬುದರ ತನಿಖೆ ನಡೆಯುತ್ತಿದೆ. ಶಾಲೆಯವರು ಹಾಸ್ಟೆಲ್ಗೆ ಅನುಮತಿ ಪಡೆದಿದ್ದರೇ ಎಂಬುದರ ಬಗ್ಗೆ ಪರಿಶೀಲಿಸಲು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಪತ್ರ ಬರೆಯಲಾಗಿದೆ. ಶಾಲೆಯ ವೈಫಲ್ಯದ ಬಗ್ಗೆಯೂ ತನಿಖೆ ಮಾಡುತ್ತೇವೆ’ ಎಂದು ಹೇಳಿದರು.

ಘಟನೆ ಬಳಿಕ ಬಾಲಕ ಬಳ್ಳಾರಿ ನಗರದಲ್ಲೇ ಇದ್ದ. ದೇವಸ್ಥಾನಗಳಲ್ಲಿ ನೀಡುವ ಪ್ರಸಾದ ಸೇವಿಸುತ್ತಾ ಎರಡು ದಿನ ಕಳೆದಿದ್ದ ಎನ್ನಲಾಗಿದೆ.

ಕರ್ನೂಲ್ ಆಸ್ಪತ್ರೆಗೆ: ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಬಾಲಕನನ್ನು ಕರ್ನೂಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನುಳಿದವರು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.