ತೆಕ್ಕಲಕೋಟೆ: ಸಮೀಪದ ಸಿರಿಗೇರಿ ಗ್ರಾಮವನ್ನು ಕಂದಾಯ ಗ್ರಾಮವಾಗಿ ಘೋಷಿಸಲು ಬಳ್ಳಾರಿ ಜಿಲ್ಲಾ ಸಹಾಯಕ ಆಯುಕ್ತ ಹಾಗೂ ತಹಶೀಲ್ದಾರ್ ಅವರು ಗುರುವಾರ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಗ್ರಾಮಸ್ಥರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಸಹಾಯಕ ಆಯುಕ್ತ ಎಚ್.ಡಿ. ರಾಜೇಶ ಮಾತನಾಡಿ, ‘ಬಸವನಪೇಟೆ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಉದ್ದೇಶದಿಂದ ಪರಿಶೀಲನೆ ನಡೆಸುತ್ತಿದ್ದು, ಮನೆ ನಿರ್ಮಿಸಿ ವಾಸವಿರುವವರಿಗೆ ಮಾತ್ರ ಹಕ್ಕುಪತ್ರ ನೀಡಲಾಗುವುದು. ಬಸವನಪೇಟೆಯ 5.80 ಎಕರೆ ಭೂಮಿಯು ಹಳ್ಳಿಮರದ ವೀರೇಶ ಎಂಬುವರ ಹೆಸರಿನಲ್ಲಿದೆ. ಸಮೀಕ್ಷೆಯಂತೆ ಈಗಾಗಲೆ ಮನೆಕಟ್ಟಿಕೊಂಡು ವಾಸವಾಗಿರುವ 106 ಜನರಿಗೆ ಹಕ್ಕುಪತ್ರ ವಿತರಿಸಲಾಗುವುದು’ ಎಂದರು.

ಸರ್ವೆ ಕಾರ್ಯಕ್ಕೆ ಹಳ್ಳಿಮರದ ವೀರೇಶ ಸಹಕರಿಸಿದರು. ಈ ವೇಳೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.ಸಿರುಗುಪ್ಪ ತಹಶೀಲ್ದಾರ್ ಗೌಸಿಯಾ ಬೇಗಂ, ಆರ್.ಐ. ಗಣೇಶ, ಗ್ರಾಮ ಆಡಳಿತಾಧಿಕಾರಿ ಶಿವಪುತ್ರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-25-641644192

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.