ತೆಕ್ಕಲಕೋಟೆ: ಸಮೀಪದ ಸಿರಿಗೇರಿ ಗ್ರಾಮದ ಕೆರೆ ಅಭಿವೃದ್ಧಿ, ಅಟಲ್ ಸೇವಾ ಕೇಂದ್ರ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತೆ ಬಳ್ಳಾರಿ ಜಿಲ್ಲಾಧಿಕಾರಿ ಕೆ ನಾಗೇಂದ್ರ ಪ್ರಸಾದ ಅವರಿಗೆ 'ನಿಮಗಾಗಿ ನಾವು ಸಂಸ್ಥೆ' ಗ್ರಾಮ ಘಟಕದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಸಿರಿಗೇರಿ ಗ್ರಾಮ ಪಂಚಾಯಿತಿಯು 31 ಸದಸ್ಯರಿದ್ದು, 17 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿದೆ. ಕಳೆದ ಆರು ತಿಂಗಳಿಂದ ಆಧಾರ್ ಕೇಂದ್ರ ಸ್ಥಗಿತಗೊಂಡಿದ್ದು, ತಹಸಿಲ್ದಾರರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ, ಗ್ರಾಮದ ಹೃದಯ ಭಾಗದಲ್ಲಿರುವ ಊರಿನಕೆರೆಯಲ್ಲಿ ಗಿಡಗಂಟಿಗಳು ಬೆಳೆದು ಸಾಂಕ್ರಾಮಿಕ ರೋಗದ ಭೀತಿ ಆವರಿಸಿದೆ. ಶಾಸಕರು ಸ್ಥಳಕ್ಕೆ ಭೇಟಿ ನೀಡಿ ₹4.75 ಕೋಟಿ ಅನುದಾನ ಒದಗಿಸುವ ಭರವಸೆ ನೀಡಿದ್ದರು. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಿಮಗಾಗಿ ನಾವು ಸಂಸ್ಥೆಯವರು ಒತ್ತಾಯಿಸಿದರು. ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಿಮಗಾಗಿ ನಾವು ಸಂಸ್ಥೆಯ ಗ್ರಾಮ ಘಟಕದ ಅಧ್ಯಕ್ಷ ಕೊಳ್ಳಿ ಶೇಖರ್, ಉಪಾಧ್ಯಕ್ಷ ಹಳ್ಳಿಮರದ ನಾಗರಾಜ್, ಖಜಾಂಚಿ ಶಿವಾಜಿ ರಾವ್, ಪದಾಧಿಕಾರಿ ಬಿ ಪುನೀತ್ ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-25-1834185229

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.