ಬಳ್ಳಾರಿ: ಜಿಲ್ಲೆಯಲ್ಲಿ ಮೇ 18 ರಿಂದ 25 ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ-2ಗಾಗಿ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಂಡಿದೆ. ಪರೀಕ್ಷಾ ಅಕ್ರಮ ತಡೆಗಟ್ಟಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯ ಆಯ್ದ 10 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ‘ನಿಷೇಧಿತ ವಲಯ’ ಎಂದು ಘೋಷಿಸಲಾಗಿದೆ.

ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅಡಿ ಈ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಸಮಯದಲ್ಲಿ ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿ ಹಾಗೂ ಇಂಟರ್ನೆಟ್ ಸೆಂಟರ್ಗಳನ್ನು ಕಡ್ಡಾಯವಾಗಿ ಮುಚ್ಚಬೇಕು. ಅಲ್ಲದೆ, ಅನಧಿಕೃತ ವ್ಯಕ್ತಿಗಳು ಅಥವಾ ಗುಂಪುಗಳು ಕೇಂದ್ರಗಳ ಹತ್ತಿರ ಸುಳಿಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-25-923527925

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.