ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‌ ಆರಂಭ

Published 11 ಜುಲೈ 2023, 16:13 IST
Last Updated 11 ಜುಲೈ 2023, 16:13 IST
ಅಕ್ಷರ ಗಾತ್ರ

ಬಳ್ಳಾರಿ: ಜಿಲ್ಲೆಯೊಳಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಮಾಡುವ ಸಂಬಂಧ ಆನ್‌ಲೈನ್‌ ಕೌನ್ಸೆಲಿಂಗ್‌ ಮಂಗಳವಾರದಿಂದ ಆರಂಭವಾಗಿದ್ದು, ಪ್ರಾಥಮಿಕ ಶಾಲೆ ಸಹ ಶಿಕ್ಷಕರು, ದೈಹಿಕ ಶಿಕ್ಷಕರು ಸೇರಿದಂತೆ 674 ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ.

ಮಂಗಳವಾರ ಪ್ರಾಥಮಿಕ ಶಾಲೆಯ 314 ಸಹ ಶಿಕ್ಷಕರ (14 ದೈಹಿಕ ಶಿಕ್ಷಕರು) ವರ್ಗಾವಣೆ ಕೌನ್ಸೆಲಿಂಗ್‌ ನಡೆಸಲಾಗಿದ್ದು, ಬುಧವಾರ 360 ಸಹ ಶಿಕ್ಷಕರ ಕೌನ್ಸೆಲಿಂಗ್‌ ನಡೆಯಲಿದೆ. ಗುರುವಾರ ಮತ್ತು ಶುಕ್ರವಾರ 213 ಪ್ರೌಢಶಾಲಾ ಸಹ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಜರುಗಲಿದೆ.

15ರಂದು ಪರಸ್ಪರರ ಸ್ಥಳಗಳಿಗೆ ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಐವರು ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರಿಗೆ ಒಒಡಿ ನೀಡಲಾಗಿದೆ. ಶಾಲೆಗಳಲ್ಲಿ ಮಕ್ಕಳ ಪಾಠ– ಪ್ರವಚನಕ್ಕೆ ತೊಂದರೆ ಇಲ್ಲ ಎಂದೂ ಮೂಲಗಳು ಹೇಳಿವೆ. ವರ್ಗಾವಣೆ ಕೌನ್ಸೆಲಿಂಗ್‌ ಹಿನ್ನೆಲೆಯಲ್ಲಿ ಇಲ್ಲಿನ ಕೋಟೆ ಪ್ರದೇಶದಲ್ಲಿರುವ ಡಿಡಿಪಿಐ ಕಚೇರಿ ಮುಂದೆ ಮಂಗಳವಾರ ಶಿಕ್ಷಕರು ಜಮಾಯಿಸಿದ್ದರು.

ಬಳ್ಳಾರಿ ಪೂರ್ವ ಹಾಗೂ ಪಶ್ಚಿಮ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1254 ಶಿಕ್ಷಕರಿದ್ದಾರೆ ಎಂದು ಮೂಲಗಳು ವಿವರಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT