ನಡವಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಈಗಾಗಲೇ ₹32 ಕೋಟಿ ವೆಚ್ಚದ ಪುನಶ್ಚೇತನ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆ ಸಿಕ್ಕ ಬಳಿಕ ಕಾಮಗಾರಿ ಆರಂಭಿಸಲಾಗುವುದು
ರಾಹುಲ್, ಎಇಇ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಿರುಗುಪ್ಪ
ಯೋಜನೆಯಿಂದ 15 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿತ್ತು. ದಿನನಿತ್ಯ ಬಳಕೆಗೆ ಪಂಚಾಯಿತಿಯಿಂದ ಬೋರ್‌ವೆಲ್ ನೀರನ್ನು ನೀಡಲಾಗುತ್ತಿದೆ. ಆದರೆ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕು