ತೆಕ್ಕಲಕೋಟೆ: ರಾಷ್ಟ್ರೀಯ ಹೆದ್ದಾರಿ 150 ಎ ಸಮೀಪದ ಭೈರಾಪುರ ಹಳ್ಳದ ಬಳಿ ಮಿನಿ ಗೂಡ್ಸ್ ಆಟೋ ಏಕಾಏಕಿ ಹೊತ್ತಿ ಉರಿದ ಘಟನೆ ಶನಿವಾರ ನಡೆದಿದೆ.

ಪಟ್ಟಣದ ವರವಿನ ಮಲ್ಲೇಶ್ವರ ದೇವಸ್ಥಾನಕ್ಕೆ ಬಳ್ಳಾರಿಯಿಂದ ಆಗಮಿಸಿದ್ದ 15 ಜನರ ತಂಡ, ದೇವರ ದರ್ಶನ ಪಡೆದು ಮರಳಿ ಬಳ್ಳಾರಿಗೆ ತೆರಳುವ ಸಂದರ್ಭದಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ವಾಹನದಲ್ಲಿದ್ದವರು ಕೆಳಗಿಳಿದು ದೂರ ಹೋಗಿದ್ದಾರೆ.

ಮಾರ್ಗ ಮಧ್ಯೆ ತೆರಳುತ್ತಿದ್ದ ಬಳ್ಳಾರಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಂ.ಎಸ್ ಸಿದ್ದಪ್ಪ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-25-1718801822

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.