ತೆಕ್ಕಲಕೋಟೆ: ಅಕ್ರಮವಾಗಿ ₹56,250 ಮೌಲ್ಯದ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಹಾಗೂ ಆಹಾರ ಇಲಾಖೆಯ ಸಿಬ್ಬಂದಿ ಬುಧವಾರ ವಶಪಡಿಸಿಕೊಂಡಿದ್ದಾರೆ.

ಅಕ್ಕಿಯನ್ನು ಹೆರಕಲ್ ಗ್ರಾಮದಿಂದ ಸಿರುಗುಪ್ಪ ಕಡೆಗೆ ಹೋಗುವ ಮಾರ್ಗದ ಲಗೇಜ್ ಆಟೊದಲ್ಲಿ ಇದ್ದ 50 ಕೆ.ಜಿ ತೂಕದ 45 ಮೂಟೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಿರುಗುಪ್ಪ ಆಹಾರ ನಿರೀಕ್ಷಕ ಮಹಾರುದ್ರಗೌಡ ಅವರು ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ, ಸಿರಿಗೇರಿ ಗ್ರಾಮದಿಂದ ತೆಕ್ಕಲಕೋಟೆ ಕಡೆಗೆ ಹೋಗುತ್ತಿದ್ದ ಲಗೇಜ್ ಆಟೊದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಕೆ.ಜಿ. ತೂಕದ 30 ಮೂಟೆಗಳಲ್ಲಿದ್ದ ಒಟ್ಟು ₹37,500 ಮೌಲ್ಯದ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ಕರೂರು ಗ್ರಾಮದ ನಿವಾಸಿ, ಆಟೊ ಚಾಲಕ ಇಬ್ರಾಹಿಂ ವಿರುದ್ಧ ಸಿರುಗುಪ್ಪ ಆಹಾರ ನಿರೀಕ್ಷಕ ಮಹಾರುದ್ರಗೌಡ ಅವರು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-25-992067485

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.