ಬಳ್ಳಾರಿ: ನಗರದ ದುರ್ಗಮ್ಮನಗುಡಿ ಬಳಿಯ ಟ್ರಾಫಿಕ್ ಸಿಗ್ನಲ್ನಲ್ಲಿ ಹಸಿರು ಹೊದಿಕೆಯ ಮೂಲಕ ನೆರಳಿನ ವ್ಯವಸ್ಥೆ ಮಾಡಿಲಾಗಿದ್ದು, ಇತರ ಟ್ರಾಫಿಕ್ ಸಿಗ್ನಲ್ಗಳ ಬಳಿಯೂ ಇದೇ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪಾಲಿಕೆ ತಿಳಿಸಿದೆ.

ದುರ್ಗಮ್ಮನಗುಡಿ ಬಳಿಯ ಸಿಗ್ನಲ್ನಲ್ಲಿ ನೆರಳಿನ ವ್ಯವಸ್ಥೆ ಮಾಡಿರುವುದಕ್ಕೆ ವಾಹನ ಸವಾರರೂ ಸೇರಿದಂತೆ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಈ ಬಾರಿ ಬೇಸಿಗೆ ಹೆಚ್ಚು ಪ್ರಖರವಾಗಿರಲಿದ್ದು, ನಗರದ ಟ್ರಾಫಿಕ್ ಸಿಗ್ನಲ್ಗಳಲ್ಲಿ ನೆರಳಿನ ವ್ಯವಸ್ಥೆ ಮಾಡುವಂತೆ ಇತ್ತೀಚೆಗೆ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿಯು ಬಳ್ಳಾರಿ ಮಹಾನಗರ ಪಾಲಿಕೆಗೆ ಸೂಚನೆ ನೀಡಿದ್ದರು.

ಅದರಂತೆ ಮೊದಲ ಹಂತದಲ್ಲಿ ಮೇಯರ್ ನಿಧಿಯಲ್ಲಿ ಬಳ್ಳಾರಿಯ ದುರ್ಗಮ್ಮನ ಗುಡಿಯ ಸಿಗ್ನಲ್ನಲ್ಲಿ ಮೂರು ಕಡೆಗಳಲ್ಲಿ ನೆರಳಿನ ವ್ಯವಸ್ಥೆ ಮಾಡಲಾಗಿದೆ. ಒಂದು ಕಡೆಗೆ ನೆರಳಿನ ವ್ಯವಸ್ಥೆ ಮಾಡಲು ₹50 ಸಾವಿರ ಖರ್ಚಾಗುತ್ತದೆ ಎಂದು ಪಾಲಿಕೆ ಆಯುಕ್ತ ಮಂಜುನಾಥ್ ತಿಳಿಸಿದ್ದಾರೆ.

ಇಂದಿರಾ ವೃತ್ತ, ತಾಳೂರು ವೃತ್ತ, ರಂಗಮಂದಿರ ಸೇರಿದಂತೆ ಎಲ್ಲೆಲ್ಲಿ ಸಿಗ್ನಲ್ಗಳಿವೆಯೋ ಅಲ್ಲಿ ನೆರಳು ಕಲ್ಪಿಸಲಾಗುವುದು ಎಂದು ಅವರು ಹೇಳಿದರು. ಇದಕ್ಕಾಗಿ ಈಗಾಗಲೇ ಸಂಘ ಸಂಸ್ಥೆಗಳನ್ನು ಸಂಪರ್ಕಿಸಿದ್ದು, ಮೂರುನಾಲ್ಕು ಸಂಘಗಳು ವ್ಯವಸ್ಥೆ ಮಾಡಲು ಮುಂದಾಗಿವೆ ಎಂದು ಅವರು ಮಾಹಿತಿ ನೀಡಿದರು.

ದುರ್ಗಮ್ಮನ ಗುಡಿ ಬಳಿ 2022ರಲ್ಲಿ ಇಂಥದ್ದೇ ವ್ಯವಸ್ಥೆ ಮಾಡಲಾಗಿತ್ತು. ಅದಾದ ಬಳಿಕ ಇದೇ ಮೊದಲ ಬಾರಿಗೆ ನೆರಳಿನ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಡಳಿತದ ವಿಪತ್ತು ನಿರ್ವಹಣಾ ಪ್ರಾಧಿಕಾರ ವಿಭಾಗದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಬಳ್ಳಾರಿಯಲ್ಲಿ ಕಳೆದ ಎರಡು ದಿನಗಳಿಂದ 38ರಿಂದ 39 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗುತ್ತಿದೆ. ಈಗಾಗಲೇ ಹಲವು ಕಡೆಗಳಲ್ಲಿ ಸಂಘ ಸಂಸ್ಥೆಗಳು ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.