ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡ್ಲಿಗಿ: ನ್ಯಾಯಾಧೀಶರ ಅಧಿಕಾರ ಸ್ವೀಕಾರ

Published 23 ಮೇ 2023, 6:59 IST
Last Updated 23 ಮೇ 2023, 6:59 IST
ಅಕ್ಷರ ಗಾತ್ರ

ಕೂಡ್ಲಿಗಿ: ಪಟ್ಟಣದ ನ್ಯಾಯಾಲಯಕ್ಕೆ ನೂತನವಾಗಿ ವರ್ಗಾವಣೆಗೊಂಡು ಬಂದಿರುವ ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶ ಹಾಗೂ ಕಿರಿಯ ನ್ಯಾಯಾಲಯದ ನ್ಯಾಯಾಧೀಶೆ ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು.

ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ವಕೀಲರ ಸಂಘದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಕೆ. ಶಿವರಾಜ್ ಹಾಗೂ ಕಿರಿಯ ನ್ಯಾಯಾಲಯದ ನ್ಯಾಯಾಧೀಶೆ ಮಹಾಲಕ್ಷ್ಮಿ ಅವರನ್ನು ಸನ್ಮಾನಿಸಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ನ್ಯಾಯಾಧೀಶ ಕೆ. ಶಿವರಾಜ್, ‘ಯಾರು ಕಾನೂನತ್ಮಕ ವಿಷಯಗಳಲ್ಲಿ ಹೊಸತನ ಕಂಡುಕೊಳ್ಳುತ್ತಾರೋ ಅಂತವರು ಉತ್ತಮ ವಕೀಲರಾಗಲು ಸಾಧ್ಯವಾಗುತ್ತದೆ. ವಯಸ್ಸು ಹಾಗೂ ಅನುಭವದ ಆಧಾರದ ಮೇಲೆ ಕಿರಿಯ, ಹಿರಿಯ ವಕೀಲರು ಎಂದು ಗುರುತಿಸಲಾಗುತ್ತದೆ. ಆದರೆ ಈಗ ಕಾಲ ಬದಲಾಗುತ್ತಿದ್ದು, ಯಾರು ಹೆಚ್ಚು ಕಾನೂನತ್ಮಕ ವಿಷಯಗಳನ್ನು ತಿಳಿದುಕೊಳ್ಳುತ್ತರೋ ಅಂತವರು ಹಿರಿಯ ವಕೀಲರಾಗುತ್ತಾರೆ. ವಕೀಲ ವೃತ್ತಿಯಲ್ಲಿ ನಿತ್ಯ ಕಲಿಕೆ ಇರುತ್ತದೆ. ನ್ಯಾಯದಾನ ವಿಷದಯದಲ್ಲಿ ಎಲ್ಲರ ಸಹಕಾರ ಅಗತ್ಯ’ ಎಂದು ತಿಳಿಸಿದರು.

ಕಿರಿಯ ನ್ಯಾಯಾಲಯದ ನೂತನ ನ್ಯಾಯಾಧೀಶೆ ಮಹಾಲಕ್ಷ್ಮಿ ಮಾತನಾಡಿದರು.

ಸಹಾಯಕ ಸರ್ಕಾರಿ ಅಭಿಯೋಜಕಿ ಶಿಲ್ಪ, ಹೆಚ್ಚುವರಿ ಸರ್ಕಾರಿ ವಕೀಲ ಕೆ.ಜಿ. ಶಿವಪ್ರಸಾದ್, ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎಂ.ಮಲ್ಲಿಕಾರ್ಜುನಯ್ಯ, ಉಪಾಧ್ಯಕ್ಷ ಎಚ್. ವೆಂಕಟೇಶ್, ಕಾರ್ಯದರ್ಶಿ ಡಿ.ಕೆ.ಬಿ. ರಾಜು, ಜಂಟಿ ಕಾರ್ಯದರ್ಶಿ ಕೆ. ಮದ್ದಾನಪ್ಪ, ಖಜಾಂಚಿ ಗೋವಿಂದಪ್ಪ, ಗ್ರಂಥಪಾಲಕ ಎಂ. ರಾಮಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT