ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಎಸ್ಸಿ, ಎಸ್ಟಿ ವಸತಿ ನಿಲಯಗಳಲ್ಲಿ ಕಳಪೆ ಆಹಾರ ಮತ್ತು ಮೂಲಸೌಕರ್ಯ ಕೊರತೆ ಖಂಡಿಸಿ ಎಐಡಿಎಸ್ಒನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಅಧಿಕಾರಿಗಳು ಸ್ಪಂದಿಸಿದ್ದಾರೆ.

ಶನಿವಾರ ವಸತಿ ನಿಲಯಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ರಾಜೇಶ್ವರಿ, ಸ್ವಚ್ಛತೆಯ ಕೊರತೆ ಹಾಗೂ ವಿದ್ಯಾರ್ಥಿಗಳ ಚರ್ಮದ ಸಮಸ್ಯೆಗಳನ್ನು ಪರಿಶೀಲಿಸಿದರು.

ಈ ವೇಳೆ ವಿದ್ಯಾರ್ಥಿಗಳು ತಮಗಾಗುತ್ತಿರುವ ತೊಂದರೆಗಳ ಬಗ್ಗೆ ಮನವಿ ಸಲ್ಲಿಸಿದರು. ಸಮಸ್ಯೆಗಳ ನಿವಾರಣೆ ಹಾಗೂ ವಸತಿನಿಲಯದ ನಿರ್ವಹಣೆಯನ್ನು ಇಲಾಖೆಗೆ ವಹಿಸುವ ಕುರಿತು ಮೇ 19ರಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.

ವಿದ್ಯಾರ್ಥಿ ಮುಖಂಡರಾದ ನಿಹಾರಿಕಾ ಆರ್., ಅರುಣ್ ಭಗತ್ ಹಾಗೂ ಮಂಜುನಾಥ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-25-127608814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.