ಬಳ್ಳಾರಿ: ವೈದ್ಯಕೀಯ ಪದವಿ ಪಡೆದ ನಂತರ ‘ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ (ಕೆಪಿಎಂಇ) ಅಡಿಯಲ್ಲಿ ನೋಂದಣಿ ಮಾಡಿಕೊಳ್ಳದೆ ಕ್ಲಿನಿಕ್ ಅಥವಾ ಆಸ್ಪತ್ರೆ ನಡೆಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಎಚ್ಚರಿಸಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ‘ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆಗಳ ಸಭೆ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಅಧಿನಿಯಮ 2007 ಮತ್ತು 2009ರ ತಿದ್ದುಪಡಿ ನಿಯಮಗಳ ಪ್ರಕಾರ, ಯಾವುದೇ ವೈದ್ಯರು ಕ್ಲಿನಿಕ್, ಪಾಲಿಕ್ಲಿನಿಕ್, ನರ್ಸಿಂಗ್ ಹೋಮ್ ಅಥವಾ ಪ್ರಯೋಗಾಲಯಗಳನ್ನು ಆರಂಭಿಸುವ ಮೊದಲು ಜಿಲ್ಲಾ ಸಮಿತಿಯಿಂದ ಕಡ್ಡಾಯವಾಗಿ ಕೆಪಿಎಂಇ ನೋಂದಣಿ ಪ್ರಮಾಣಪತ್ರ ಪಡೆಯಬೇಕು. ಒಂದು ವೇಳೆ ನೋಂದಣಿ ಮಾಡಿಕೊಳ್ಳದೆ ಅಥವಾ ಸಕಾಲಕ್ಕೆ ನವೀಕರಣ ಮಾಡದೆ ಸಂಸ್ಥೆ ನಡೆಸುತ್ತಿದ್ದರೆ, ಅಂಥ ಕೇಂದ್ರಗಳಿಗೆ ₹25,000 ದಂಡ ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.

‘ಮನೆ, ಮಳಿಗೆಗಳನ್ನು ಆಸ್ಪತ್ರೆ, ಕ್ಲಿನಿಕ್, ಲ್ಯಾಬ್ಗಳಿಗೆ ಬಾಡಿಗೆ ನೀಡುವ ಮುನ್ನ ಮಾಲೀಕರು ಎಚ್ಚರಿಕೆ ವಹಿಸಬೇಕು. ಬಾಡಿಗೆದಾರರ ಅಧಿಕೃತ ವೈದ್ಯಕೀಯ ನೋಂದಣಿ ಪ್ರಮಾಣಪತ್ರಗಳನ್ನು ಪರಿಶೀಲಿಸಿ ಬಾಡಿಗೆ ಒಪ್ಪಂದ ಮಾಡಿಕೊಳ್ಳಬೇಕು. ಜಿಲ್ಲೆಯ ಆರೋಗ್ಯ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಗುಣಮಟ್ಟದ ಚಿಕಿತ್ಸೆ ಖಾತ್ರಿಪಡಿಸಲು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು’ ಎಂದು ಅವರು ನಿರ್ದೇಶಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಸೇರಿದಂತೆ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಹಾಗೂ ನೋಂದಣಿ ಮತ್ತು ಕುಂದುಕೊರತೆ ಪರಿಹಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-25-1585816763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.