ಬಳ್ಳಾರಿ: ‘ಪರಮಾಣು ಶಕ್ತಿ ನಿಯಂತ್ರಣ ಮಂಡಳಿ (ಎಇಆರ್ಬಿ)’ಯಿಂದ ಅನುಮತಿ ಸಿಕ್ಕ ಕೂಡಲೇ ವಿಮ್ಸ್ನಲ್ಲಿ ರೇಡಿಯೊಥೆರಪಿ ಸೇವೆ ಆರಂಭಿಸಲಾಗುವುದು’ ಎಂದು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರು ದೂರು ಅರ್ಜಿಯೊಂದಕ್ಕೆ ನೀಡಿದ ಸ್ಪಷ್ಟನೆಯಲ್ಲಿ ತಿಳಿಸಿದ್ದಾರೆ.

ಶತಮಾನದ ಇತಿಹಾಸ ಹೊಂದಿರುವ ‘ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ಬಿಎಂಸಿಆರ್ಸಿ)’ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಸಾಮಾಜಿಕ ಕಾರ್ಯಕರ್ತ ಆರ್. ವೆಂಕಟ ರೆಡ್ಡಿ ಇತ್ತೀಚೆಗೆ ದೂರು ಸಲ್ಲಿಸಿದ್ದರು. ಅದರಲ್ಲಿ ಉಲ್ಲೇಖಿಸಿದ್ದ ಸಮಸ್ಯೆಗಳು ಮತ್ತು ಪ್ರಶ್ನೆಗಳಿಗೆ ಬಿಎಂಸಿಆರ್ಸಿ ಉತ್ತರ ನೀಡಿದೆ.

ಎರಡು ವರ್ಷಗಳಿಂದ ರೇಡಿಯೋಥೆರಪಿ ಯಂತ್ರ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಕ್ಯಾನ್ಸರ್ ರೋಗಿಗಳು ಬೆಂಗಳೂರು, ಹೈದರಾಬಾದ್ಗೆ ತೆರಳುವ ಅನಿವಾರ್ಯತೆ ಎದುರಿಸುತ್ತಿರುವುದಾಗಿ ವೆಂಕಟರೆಡ್ಡಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಒಳರೋಗಿ ಸೇವೆಗಳು ಆರಂಭವಾಗದೇ ಇರುವುದರ ಕುರಿತು ವೆಂಕಟರೆಡ್ಡಿ ಪ್ರಶ್ನೆ ಎತ್ತಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಎಂಸಿಆರ್ಸಿ ನಿರ್ದೇಶಕರು ‘ಶೀಘ್ರದಲ್ಲೇ ಈ ಸೇವೆಗಳು ಆರಂಭವಾಗಲಿವೆ’ ಎಂದಿದ್ದಾರೆ. ಆದರೆ, ಯಾವಾಗ ಎಂಬುದನ್ನು ಸ್ಪಷ್ಟವಾಗಿ ತಿಳಿಸಿಲ್ಲ.

‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಆರಂಭವಾದ ನಂತರ ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆಗಳು ಲಭ್ಯವಾಗಲಿವೆ’ ಎಂದು ಸ್ಪಷ್ಟನೆಯಲ್ಲಿ ತಿಳಿಸಲಾಗಿದೆ.

ವೈದ್ಯರು ಮತ್ತು ಸಿಬ್ಬಂದಿ ಕೊರತೆ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಂಆರ್ಐ, ಸಿಟಿ ಸ್ಕ್ಯಾನ್ ಸೇರಿದಂತೆ ಹಲವು ಪರೀಕ್ಷೆಗಳು ಆಸ್ಪತ್ರೆಯಲ್ಲೇ ನಡೆಯುತ್ತಿವೆ’ ಎಂದು ನಿರ್ದೇಶಕರು ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ.

‘ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-25-867372425

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.