ಬಳ್ಳಾರಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣಾ ನಿಯಮಗಳು-2026ರ ಅನ್ವಯ ಕಸ ವಿಲೇವಾರಿಗೆ ಹೊಸ ನಿಯಮ ಜಾರಿಗೊಳಿಸಲಾಗಿದ್ದು, ಮೂಲದಲ್ಲೇ 4 ಭಾಗಗಳಾಗಿ ಕಸ ವಿಂಗಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಮನೆ ಅಥವಾ ಸಂಸ್ಥೆಗಳ ಕಸವನ್ನು ಹಸಿ, ಒಣ, ಸ್ಯಾನಿಟರಿ ಹಾಗೂ ವಿಶೇಷ ಕಾಳಜಿಯ ತ್ಯಾಜ್ಯ ಎಂದು ಪ್ರತ್ಯೇಕಿಸಿ ಪಾಲಿಕೆ ವಾಹನಕ್ಕೆ ನೀಡಬೇಕು. ಸ್ಯಾನಿಟರಿ ತ್ಯಾಜ್ಯವನ್ನು ಪೇಪರ್ನಲ್ಲಿ ಸುರಕ್ಷಿತವಾಗಿ ಸುತ್ತಿ ನೀಡಬೇಕು. ಸಾರ್ವಜನಿಕ ಸ್ಥಳ ಅಥವಾ ಚರಂಡಿಗಳಲ್ಲಿ ಕಸ ಎಸೆಯುವುದು ಮತ್ತು ಸುಡುವುದನ್ನು ನಿಷೇಧಿಸಲಾಗಿದೆ. ಬೀದಿ ವ್ಯಾಪಾರಿಗಳು ಕಡ್ಡಾಯವಾಗಿ ಡಸ್ಟ್ಬಿನ್ ಇಟ್ಟುಕೊಂಡು ಕಸ ಸಂಗ್ರಹಿಸಬೇಕು.

100 ಕ್ಕಿಂತ ಹೆಚ್ಚು ಜನರು ಸೇರುವ ಸಮಾರಂಭಗಳಿಗೆ 3 ದಿನ ಮುಂಚಿತವಾಗಿ ಪಾಲಿಕೆ ಅನುಮತಿ ಹಾಗೂ ಪರವಾನಗಿ ಪಡೆಯುವುದು ಕಡ್ಡಾಯ. ಇನ್ನು 5000 ಚ.ಮೀ. ಗಿಂತ ಹೆಚ್ಚಿನ ವಿಸ್ತೀರ್ಣದ ಅಥವಾ ನಿತ್ಯ 100 ಕೆ.ಜಿ.ಗೂ ಹೆಚ್ಚು ತ್ಯಾಜ್ಯ ಉತ್ಪಾದಿಸುವ ಹೋಟೆಲ್, ವಸತಿ ಸಮುಚ್ಚಯ ಹಾಗೂ ಆಸ್ಪತ್ರೆಗಳು ತಮ್ಮ ಆವರಣದಲ್ಲೇ ಹಸಿ ಕಸವನ್ನು ಸಂಸ್ಕರಿಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆ ಎಚ್ಚರಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-25-719377302

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.