ಬಳ್ಳಾರಿ: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳ ಪರಿಹಾರಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್)ಯು ಈಚೆಗೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಸಮರ ಸಾರುವ ರಾಜ್ಯವ್ಯಾಪಿ ಆಂದೋಲನದ ಸಮಾರೋಪ ಕಾರ್ಯಕ್ರಮದ ಭಾಗವಾಗಿ ಮನವಿ ಸಲ್ಲಿಸಲಾಯಿತು.

ಎಐಎಂಎಸ್ಎಸ್ ಜಿಲ್ಲಾ ಘಟಕದ ಅಧ್ಯಕ್ಷೆ ಕೆ.ಎಂ. ಈಶ್ವರಿ, ‘ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಎಐಎಂಎಸ್ಎಸ್ನ ರಾಜ್ಯ ಸಮಿತಿಯು 2025ರ ನವೆಂಬರ್ 25ರಿಂದ ಮಾರ್ಚ್ 25ರ ವರೆಗೆ ರಾಜ್ಯವ್ಯಾಪಿ ಆಂದೋಲನದ ಭಾಗವಾಗಿ ಸಹಿ ಸಂಗ್ರಹಣಾ ಅಭಿಯಾನ ನಡೆಸಿದೆ. ಈ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ಕೆಲವು ಕಾರ್ಯ ಸೂಚಿಗಳನ್ನು ಮಾಡಿದೆ. ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ‘ಇವ ನಮ್ಮವ’ ಕಾಯ್ದೆಯನ್ನು ಜಾರಿಗೊಳಿಸಿದೆ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ನಿರ್ಬಂಧಿಸಿದೆ. ಈ ಕ್ರಮಗಳು ಸ್ವಾಗತಾರ್ಹ’ ಎಂದು ಆಗ್ರಹಿಸಿದರು.

‘ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಕೈಬಿಡಬೇಕು. ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು. ಸ್ತ್ರೀ ಭ್ರೂಣ ಹತ್ಯೆ, ಬಾಲ್ಯ ವಿವಾಹ, ಅಪ್ರಾಪ್ತ ವಯಸ್ಕರ ಗರ್ಭಧಾರಣೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಲಾ - ಕಾಲೇಜು ಸೇರಿದಂತೆ ಎಲ್ಲಾ ಕಡೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕರ್ನಾಟಕ ಉಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನಗಳನ್ನು ಕೂಡಲೇ ಅನುಷ್ಠಾನಗೊಳಿಸಲು ಕ್ರಮ ಕೈಕೊಳ್ಳಬೇಕು. ಅಶ್ಲೀಲತೆಯ ಪ್ರಚಾರ ತಡೆಗಟ್ಟಿ, ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆಯನ್ನು ಖಾತ್ರಿಪಡಿಸಬೇಕು’ ಎಂದರು.

‘ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತ ವಾತಾವರಣ, ಸಮಾನ ಅವಕಾಶಗಳನ್ನು ಕಲ್ಪಿಸಿಕೊಡಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಎಐಎಂಎಸ್ಎಸ್ನ ಪದಾಧಿಕಾರಿಗಳಾದ ವಿಜಯಲಕ್ಷ್ಮೀ, ಪದ್ಮ, ಗಿರಿಜಾ, ಸೌಮ್ಯ, ವಿದ್ಯಾ ಹಾಗೂ ಸದಸ್ಯರಾದ ಸೌಮ್ಯ, ಶೋಭಾ, ಕರಿಬಸಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-25-1292181302

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.