ಬಳ್ಳಾರಿ: ಜಿಲ್ಲೆಯ ಮಹಿಳೆಯರ ರಕ್ಷಣೆಗಾಗಿ ಸ್ಥಾಪಿಸಲಾದ ಮಹಿಳಾ ಪೊಲೀಸ್ ಠಾಣೆಯು ಇತ್ತೀಚಿನ ದಿನಗಳಲ್ಲಿ ಮೂಲ ಉದ್ದೇಶವನ್ನೇ ಮರೆತಿದ್ದು, ಸಮಸ್ಯೆಗಳನ್ನು ಹೊತ್ತು ಬರುವ ಮಹಿಳೆಯರಿಗೆ ನ್ಯಾಯ ಸಿಗದಂತಾಗಿದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಮಿತಿಯು ಗಂಭೀರವಾಗಿ ಆರೋಪಿಸಿದೆ.

ಈ ಕುರಿತು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿರುವ ಸಂಘಟನೆಯು, ಠಾಣೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಪಟ್ಟಿಯನ್ನು ನೀಡಿದೆ.

ದೀರ್ಘ ಕಾಲದ ಹೋರಾಟದ ಫಲವಾಗಿ ಜಿಲ್ಲೆಯಲ್ಲಿ ಮಹಿಳಾ ಪೊಲೀಸ್ ಠಾಣೆ ಆರಂಭವಾಯಿತು. ಆದರೆ, ಪ್ರಸ್ತುತ ಇಲ್ಲಿ ಮಹಿಳಾ ಸಿಬ್ಬಂದಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ದೌರ್ಜನ್ಯಕ್ಕೊಳಗಾದ ಮಹಿಳೆಯರು ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಪುರುಷ ಪೊಲೀಸ್ ಅಧಿಕಾರಿಗಳ ಮುಂದೆ ಮುಕ್ತವಾಗಿ ಹಂಚಿಕೊಳ್ಳಲು ಮುಜುಗರ ಅನುಭವಿಸುತ್ತಿದ್ದಾರೆ ಎಂದು ಸಂಘಟನೆ ದೂರಿದೆ. ಅಲ್ಲದೆ, ಠಾಣೆಯ ಸುತ್ತಮುತ್ತ ಮಹಿಳೆಯರಿಗಿಂತ ಪುರುಷರ ಓಡಾಟವೇ ಹೆಚ್ಚಾಗಿರುವುದು ಮಹಿಳೆಯರಲ್ಲಿ ಆತಂಕ ಮೂಡಿಸಿದೆ.

ಮಹಿಳಾ ಸಮಸ್ಯೆಗಳನ್ನು ಬಗೆಹರಿಸಲು ಠಾಣೆಯಲ್ಲಿ ಹಣಕಾಸಿನ ವ್ಯವಹಾರಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪವನ್ನು ಸಂಘಟನೆ ಮಾಡಿದೆ. ‘ಹಣ ನೀಡದಿದ್ದರೆ ಕೆಲಸ ನಡೆಯುವುದಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಬಡ ಮಹಿಳೆಯರು ನ್ಯಾಯದಿಂದ ವಂಚಿತರಾಗುತ್ತಿದ್ದಾರೆ. ಮಹಿಳಾ ಠಾಣೆಯು ಕೇವಲ ಹೆಸರಿಗಷ್ಟೇ ಸೀಮಿತವಾಗಿದೆ’ ಎಂದು ಸಂಘಟನೆಯ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳೆಯರ ಸಮಸ್ಯೆಗಳನ್ನು ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ಬಗೆಹರಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಬೇಕು. ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮನವಿ ಸಲ್ಲಿಸಿದವರಲ್ಲಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಜೆ. ಚಂದ್ರಕುಮಾರಿ, ಜಿಲ್ಲಾ ಕಾರ್ಯದರ್ಶಿ ಈ. ವರಲಕ್ಷ್ಮಿ, ಜಿಲ್ಲಾ ಖಜಾಂಚಿ ಟಿ. ಈರಮ್ಮ, ಜಿಲ್ಲಾ ಸಮಿತಿ ಸದಸ್ಯೆ ಓಂಕಾರಮ್ಮ ಮತ್ತು ತಾಲ್ಲೂಕು ಸದಸ್ಯೆ ಜಿ. ಹೇಮಾವತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-25-1693806349

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.