ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುರುಗೋಡು:ವಿದ್ಯುತ್ ಶಾರ್ಟ್‌ ಸರ್ಕಿಟ್; ಗುಡಿಸಲು ಭಸ್ಮ

Published 3 ಏಪ್ರಿಲ್ 2024, 13:23 IST
Last Updated 3 ಏಪ್ರಿಲ್ 2024, 13:23 IST
ಅಕ್ಷರ ಗಾತ್ರ

ಕುರುಗೋಡು: ವಿದ್ಯುತ್ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಉಂಟಾಗಿ ಗುಡಿಸಲು ಮನೆ ಸುಟ್ಟು ಭಸ್ಮವಾದ ಘಟನೆ ತಾಲ್ಲೂಕಿನ ಎಚ್.ವೀರಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.

ಯಲ್ಲಪ್ಪ ಎನ್ನುವ ರೈತರಿಗೆ ಸೇರಿದ ಗುಡಿಸಲು ಇದಾಗಿದ್ದು, ರೈತ ಕುಟುಂಬದ ಸದಸ್ಯರೊಂದಿಗೆ ಜಮೀನಿಗೆ ತೆರಳಿದ ಸಂದರ್ಭದಲ್ಲಿ ಗುಡಿಸಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸುತ್ತಮುತ್ತಲಿನವರು ಬೆಂಕಿ ಕಾಣಿಸಿಕೊಂಡಿರುವುದು ಕಂಡು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹೆಚ್ಚಿಗೆ ಸಂಭವಿಸಬಹುದಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.

ಗುಡಿಸಲು ಮನೆಯ ಕಪಾಟಿನಲ್ಲಿ ಸಂಗ್ರಹಿಸಿದ್ದ ₹50 ಸಾವಿರ ನಗದು, 20 ಗ್ರಾಂ ತೂಕದ ವಿವಿಧ ಚಿನ್ನದ ಒಡವೆ, ಆಹಾರ ಪದಾರ್ಥ, ಬಟ್ಟೆ ಮತ್ತು ಇತರೇ ಬೆಲೆಬಾಳುವ ವಸ್ತುಗಳು ಸುಟ್ಟು ಕರಕಲಾಗಿ ನಷ್ಟ ಸಂಭವಿಸಿದೆ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT