ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

Last Updated 26 ಮಾರ್ಚ್ 2023, 13:18 IST
ಅಕ್ಷರ ಗಾತ್ರ

ಬಳ್ಳಾರಿ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಜಾಸತ್ತಾತ್ಮಕ ನಡೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಭಾನುವಾರ ಪ್ರತಿಭಟನಾ ಧರಣಿ ನಡೆಸಿತು.

ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಉದ್ಯಮಿ ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧ ಕುರಿತು ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಎತ್ತಿದ ರಾಹುಲ್‌ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಹುಲ್‌ ಗಾಂಧಿ ವಿರುದ್ಧ ಕೈಗೊಂಡಿರುವ ಕ್ರಮವನ್ನು ಕಾನೂನಾತ್ಮಕವಾಗಿ, ರಾಜಕೀಯವಾಗಿ ಎದುರಿಸುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ಗುಡುಗಿದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಿ.ಎಸ್.ಮಹಮ್ಮದ್ ರಫೀಕ್ ನೇತೃತ್ವದಲ್ಲಿ ನಗರದ ದಂಡುಪ್ರದೇಶದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಯಿತು.

ಮಾನಹಾನಿ ಪ್ರಕರಣದಲ್ಲಿ ರಾಹುಲ್ ಅವರಿಗೆ ಎರಡ ವರ್ಷ ಜೈಲು ಶಿಕ್ಷೆ ವಿಧಿಸಿರುವುದು; ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದು ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ಅಲ್ಲಂ ಪ್ರಶಾಂತ್, ಅಯಾಜ್ ಅಹ್ಮದ್, ಕೆಪಿಸಿಸಿ ಪ್ರಚಾರ ಸಮಿತಿಯ ವೆಂಕಟೇಶ್ ಹೆಗಡೆ, ಟಿ.ಪದ್ಮ, ಶಮೀಮ್ ಜಕ್ಕಲಿ, ಸೂರಿ, ಮಾಜಿ ಮೇಯರ್ ವೆಂಕಟರಮಣ, ಸದಸ್ಯರಾದ ಮಿಂಚು ಶ್ರೀನಿವಾಸ್, ಮಾಜಿ ಸದಸ್ಯ ನಾಗರಾಜ್ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT