ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ ಕ್ಷೇತ್ರ: ಕೆಆರ್‌ಎಸ್‌ ಅಭ್ಯರ್ಥಿಯಾಗಿ ಚನ್ನವೀರ ನಾಮಪತ್ರ ಸಲ್ಲಿಕೆ

Published 15 ಏಪ್ರಿಲ್ 2024, 15:40 IST
Last Updated 15 ಏಪ್ರಿಲ್ 2024, 15:40 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸೋಮವಾರ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಅಭ್ಯರ್ಥಿಯಾಗಿ ಸಿ.ಚನ್ನವೀರ ಅವರು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ನಾಮಪತ್ರ ಸಲ್ಲಿಸಿದರು.

ಚುನಾವಣೆಗೆ ಅಧಿಸೂಚನೆ ಪ್ರಕಟವಾದ ಬಳಿಕ ಈ ವರೆಗೆ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಏ.15 ಸೋಮವಾರದಂದು ಓರ್ವ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಇದುವರೆಗೆ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆ ದಿನವಾಗಿದ್ದು, ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT